ಹುಬ್ಬಳ್ಳಿ: ಯಡಿಯೂರಪ್ಪ, ಜಗದೀಶ ಶೆಟ್ಟರ್ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಸಂಸದ ವಿ.ಎಸ್. ಉಗ್ರಪ್ಪ ವಾಗ್ದಾಳಿ ನಡೆಸಿದರು.

ಉಪ ಚುನಾವಣೆ ನಂತರ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ಮುಖಂಡರ ಹೇಳಿಕೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ರಾಜ್ಯ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದು ಹೇಳಿದರು.

ನರೇಂದ್ರ ಮೋದಿ ದೇಶ ಕಂಡ ಭ್ರಷ್ಟ– ದುಷ್ಟ ಪ್ರಧಾನಿ. ರಫೇಲ್ ಯುದ್ಧ ವಿಮಾನ ಖರೀದಿ ಹಗರಣದಲ್ಲಿ ಸಿಲುಕಿರುವ ಅವರು, ರಾಜೀವ್ ಗಾಂಧಿ ಅವರನ್ನು ನಂಬರ್ ಒನ್ ಕರಪ್ಟ್ ಎಂದಿದ್ದಾರೆ. ಬೋಫೋರ್ಸ್ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲ ಎಂದು ಸಾಬೀತಾಗಿದೆ. ಐದು ವರ್ಷ ಸುಮ್ಮನಿದ್ದ ಪ್ರಧಾನಿ ಈಗ ಚುನಾವಣೆ ಸೋಲುವ ಹತಾಶೆಯಿಂದ ಹೀಗೆ ಮಾತನಾಡುತ್ತಿದ್ದಾರೆ ಎಂದರು.

ರಕ್ಷಣಾ ಇಲಾಖೆಯ ದಾಖಲೆಯನ್ನೇ ರಕ್ಷಿಸಲಾಗದ ಮೋದಿ ಈ ದೇಶವನ್ನು ಹೇಗೆ ರಕ್ಷಿಸುತ್ತಾರೆ ಎಂದು ಪ್ರಶ್ನಿಸಿದರು.
ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗದು, ಬದಲಾವಣೆ ಆಗೋದು ರಾಷ್ಟ್ರ ಮಟ್ಟದಲ್ಲಿ ಎಂದು ಭವಿಷ್ಯ ನುಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.