ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಬೊಮ್ಮಾಯಿ ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಸವಾಜ ಬೊಮ್ಮಾಯಿ ಅವರು ಆರೋಗ್ಯವಾಗಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬಿಜೆಪಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.