ಬೆಂಗಳೂರು: ಗುತ್ತಿಗೆದಾರನಿಂದ ₹5 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿದಂತೆ ಮೂವರು ಆರೋಪಿಗಳಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಸಂಬಂಧ ಚಂದ್ರು ಲಮಾಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

‘ಅರ್ಜಿದಾರರು ₹2 ಲಕ್ಷ ಮೊತ್ತದ ಬಾಂಡ್ ಮತ್ತು ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಅವರ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡಕೂಡದು’ ಎಂಬುದೂ ಸೇರಿದಂತೆ ಸಾಂಪ್ರದಾಯಿಕ ಷರತ್ತುಗಳನ್ನು ವಿಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.