ಬೆಂಗಳೂರು: ಮಧ್ಯವಯಸ್ಸಿನ ಮಹಿಳೆಯೊಬ್ಬರ ಮೇಲೆ ತನ್ನ ಸಹಚರರಿಂದ ಕಣ್ಣೆದುರೇ ಅತ್ಯಾಚಾರ ಮಾಡಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿದೆ.

ಈ ಕುರಿತಂತೆ ಮುನಿರತ್ನ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅರ್ಜಿ ವಜಾಗೊಳಿಸಿ ಗುರುವಾರ ಆದೇಶಿಸಿದರು.

ಸಂತ್ರಸ್ತೆಯ ಪರ ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ಅವರು, ಮುನಿರತ್ನ ಅವರು ಸಂತ್ರಸ್ತೆಗೆ ಬೆದರಿಕೆ ಒಡ್ಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ವಿವರವನ್ನು ಈ ಹಿಂದಿನ ವಿಚಾರಣೆಯಲ್ಲಿ ನ್ಯಾಯಾಲಯದ ಗಮನಕ್ಕೆ
ತಂದಿದ್ದರು.

ಪ್ರಕರಣದ ಎರಡನೇ ಆರೋಪಿ ನಂದಿನಿ ಲೇಔಟ್ನ ವಸಂತ, ಚನ್ನಕೇಶವ, ಆಶ್ರಯ ನಗರದ ಕಮಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಗಳನ್ನೂ ವಜಾಗೊಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.