‘ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿ, ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಸೆ. 13ರಂದು ವೈಯಾಲಿಕಾವಲ್ ಠಾಣೆಯಲ್ಲಿ ಮುನಿರತ್ನ ಮತ್ತು ಇತರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ನೀಡಿದ ದೂರಿನ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ಸೆ. 18ರಂದು ದಾಖಲಾಗಿದೆ. ಈ ಪ್ರಕರಣಗಳ ಗಂಭೀರತೆಯನ್ನು ಪರಿಗಣಿಸಿ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಆದೇಶದಲ್ಲಿ ಗೃಹ ಇಲಾಖೆ ವಿವರಿಸಿದೆ.