ಯಲ್ಲಾಪುರ: 'ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಆಗಿಲ್ಲ' ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

'ಮತದಾನ ಮಾಡಲಾಗದ್ದಕ್ಕೆ ಬೇಸರವಿದೆ. ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿತ್ತು. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಮಧ್ಯಾಹ್ನದ ಒಳಗೆ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ, ಆರೋಗ್ಯ ಸ್ಥಿತಿ ಸ್ಥಿರವಾಗಲು ತಡವಾಯಿತು' ಎಂದು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಸ್ಪಷ್ಟಪಡಿಸಿದರು.

'ಬಿಜೆಪಿಯಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಬಿಜೆಪಿಯಲ್ಲಿಯೇ ಕೆಲಸ ಮಾಡುತ್ತೇನೆ. ಪಕ್ಷ ಬಿಡುವ ಬಗ್ಗೆ ಯಾವುದೇ ತೀರ್ಮಾನವನ್ನೂ ಸದ್ಯಕ್ಕೆ ತೆಗೆದುಕೊಳ್ಳುವ ಯೋಚನೆ ಮಾಡಿಲ್ಲ' ಎಂದರು.

'ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಕೆಲಸ ಮಾಡಿದವರ ಮೇಲೆ ಶಿಸ್ತು ಕ್ರಮ ಜರುಗಿಸದ ಕಾರಣಕ್ಕೆ ಪಕ್ಷದ ಕೆಲ ಮುಖಂಡರ ಮೇಲೆ ಬೇಸರವಿದೆ. ಈಚೆಗೆ ಜಿಲ್ಲೆ, ತಾಲ್ಲೂಕು ಘಟಕಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ವಿಷಯದಲ್ಲಿಯೂ ನನ್ನನ್ನು ವಿಶ್ವಾಸಕ್ಕೆ ಪಡೆದಿಲ್ಲ. ನನ್ನ ಬೇಸರವಿರುವುದು ಬಿಜೆಪಿಯ ಜಿಲ್ಲಾ ಮಟ್ಟದ ಕೆಲವು ಮುಖಂಡರ ಮೇಲೆಯೇ ವಿನಃ ರಾಜ್ಯ, ರಾಷ್ಟ್ರ ಮಟ್ಟದ ನಾಯಕರ ಮೇಲಲ್ಲ' ಎಂದರು.
.ರಾಜ್ಯಸಭೆ ಚುನಾವಣೆ | ‘ಆತ್ಮಸಾಕ್ಷಿ’ ಹೆಸರಲ್ಲಿ ಎಸ್.ಟಿ. ಸೋಮಶೇಖರ್ ಸಡ್ಡು.ರಾಜ್ಯಸಭೆ ಚುನಾವಣೆ: ಮತದಾನಕ್ಕೆ ಗೈರಾದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.