ಖಾನಾಪುರ (ಬೆಳಗಾವಿ ಜಿಲ್ಲೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಸದನದಲ್ಲೇ ನನಗೆ ‘ಕೊಲೆಗಡುಕ’ ಎಂದು ನಿಂದನೆ ಮಾಡಿದ್ದಾರೆ. ಅವರ ಬೆಂಬಲಿಗರನ್ನು ಸುವರ್ಣ ಸೌಧಕ್ಕೆ ನುಗ್ಗಿಸಿ ಕೊಲೆ ಮಾಡಲು ಯತ್ನಿಸಿದ್ದಾರೆ’ ಎಂದು ಆರೋಪಿಸಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಕೂಡ ಪ್ರತಿ ದೂರು ದಾಖಲಿಸಿದ್ದಾರೆ.

ಖಾನಾಪುರ ಪಟ್ಟಣ ಠಾಣೆಯಲ್ಲಿ ಗುರುವಾರ ರಾತ್ರಿ ಅವರು ತಮ್ಮ ದೂರು ದಾಖಲಿಸಿದರು. ‘ಅಶ್ಲೀಲ’ ಪದ ಬಳಕೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಿ ಲಕ್ಷ್ಮಿ ಹೆಬ್ಬಾಳಕರ ಅವರು ಹಿರೇಬಾಗೇವಾಡಿ ಠಾಣೆಗೆ ದೂರು ಸಲ್ಲಿಸಿದ್ದಾರೆ. ಸಿ.ಟಿ. ರವಿ ಅವರನ್ನು ವಶಕ್ಕೆ ಪಡೆದ ಹಿರೇಬಾಗೇವಾಡಿ ಪೊಲೀಸರು, ಸುರಕ್ಷತೆಯ ದೃಷ್ಟಿಯಿಂದ ಖಾನಾಪುರ ಠಾಣೆಗೆ ಕರೆತಂದರು.

ವಿಪಕ್ಷ ನಾಯಕ ಆರ್.ಅಶೋಕ್, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವಿಠ್ಠಲ ಹಲಗೇಕರ, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಹಾಗೂ ಮಾಜಿ ಶಾಸಕ ಅಂಜಯ ಪಾಟೀಲ ಅವರೂ ತಡರಾತ್ರಿಯವರೆಗೂ ಠಾಣೆಯಲ್ಲೇ ಬೀಡು ಬಿಟ್ಟರು.

ರಾತ್ರಿ 10ರ ನಂತರ ವಕೀಲರನ್ನು ಕರೆಸಿ, ಸಿ.ಟಿ ರವಿ ಅವರ ದೂರನ್ನು ಬರೆಸಿದರು.
.CT Ravi Arrest | ನಾನು ಅಶ್ಲೀಲ ಪದ ಬಳಸಿಲ್ಲ: ಪೊಲೀಸರ ಮುಂದೆ CT ರವಿ ಹೇಳಿಕೆ.CT Ravi Arrest | ಮಾನಹಾನಿ ಪದ ಬಳಕೆ ಆರೋಪ: ಸಿ.ಟಿ. ರವಿ ಬಂಧನ.CT Ravi ಮಾನಹಾನಿ ಹೇಳಿಕೆ: ಯಾರು ಏನೆಂದರು?.CT Ravi Arrest | ವಿಧಾನ ಪರಿಷತ್ತಿನಲ್ಲಿ ನಡೆದಿದ್ದೇನು?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.