ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ವಿರುದ್ಧ ಜಾತಿ ನಿಂದನೆ ದೂರು ನೀಡಿದ ಛಲವಾದಿ ನಾರಾಯಣಸ್ವಾಮಿ

Last Updated 17 ಜೂನ್ 2022, 9:02 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನನ್ನನ್ನು ಸದಾ ಅಸ್ಪೃಶ್ಯ ಎಂದು ತಿಳಿಸಿ ನನ್ನ ಜಾತಿಗೆ ಅಪಮಾನ ಮಾಡಿದ್ದಾರೆ’ ಎಂದು ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪೊಲೀಸರಿಗೆ ದೂರು ನೀಡಿದ್ದಾರೆ.

ನಗರದ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ ಬಳಿಕ ಅವರು ಸುದ್ದಿಗಾರ ಜತೆ ಮಾತನಾಡಿ, ‘ಜಾತಿ ನಿಂದನೆ ಮಾಡಿರುವುದರಿಂದ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದೇನೆ. ಸಿದ್ದರಾಮಯ್ಯ ಬಗ್ಗೆ ಗೌರವ ಇದೆ. ಆದರೆ, ಅವರ ರಾಜಕೀಯ ಜಿದ್ದಾಜಿದ್ದಿ ವಿಚಾರದಲ್ಲಿ ನಮಗೆ ಆಕ್ಷೇಪವಿದೆ’ ಎಂದರು.

‘ಸಿದ್ದರಾಮಯ್ಯ ನಮ್ಮನ್ನು ಗುಲಾಮರು, ಅಸ್ಪೃಶ್ಯರೆಂದು ಕರೆದು ನಿಂದಿಸಿದ್ದಾರೆ. ಇಂಥ ನಿಂದನೆಯ ಅಧಿಕಾರ ಅವರಿಗೆ ಇಲ್ಲ. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ನೀಡಿದ್ದೇನೆ. ಜಾತಿ ನಿಂದನೆ ಮಾಡಿದ್ದರಿಂದ ಅವರನ್ನು ಬಂಧಿಸಬೇಕು. ಬಂಧಿಸುವಲ್ಲಿ ತಡ ಮಾಡಿದರೆ ಧರಣಿ ಮಾಡುತ್ತೇನೆ’ ಎಂದೂ ಹೇಳಿದ್ದಾರೆ.

ನನ್ನ ಎಲ್ಲ ಬೆಳವಣಿಗೆಗೂ ಸಿದ್ದರಾಮಯ್ಯ ಬಾಗಿಲು ಹಾಕಿದರು ಎಂದು ಮೋಟಮ್ಮ ಅವರು ತಮ್ಮ ಆತ್ಮಕಥೆಯಲ್ಲಿ ಹೇಳಿದ್ದಾರೆ. ಕಾಂಗ್ರೆಸ್‌ ಮನಸ್ಥಿತಿ ದಲಿತ ವಿರೋಧಿ ಎಂಬುದು ಈ ಮೂಲಕ ವ್ಯಕ್ತವಾಗುತ್ತದೆ ಎಂದೂ ನಾರಾಯಣಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT