ಬೆಂಗಳೂರು: ‘ನಿಮ್ಮಲ್ಲಿ ಒಗ್ಗಟ್ಟು ಇಲ್ಲ. ಹೀಗಿದ್ದರೂ ಜನರು ನಮಗೆ ಅಧಿಕಾರ ಕೊಟ್ಟೇ ಕೊಡುತ್ತಾರೆ ಎಂಬ ಭ್ರಮೆಯಲ್ಲಿ ಇರಬೇಡಿ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ರಾಜ್ಯ ಬಿಜೆಪಿ ನಾಯಕರ ಕಿವಿ ಹಿಂಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಬಂದಿರುವ ಅವರು ಪಕ್ಷದ ರಾಜ್ಯ ಘಟಕದ ನಾಯಕರ ಜತೆಗೆ ಪಕ್ಷದ ಕಚೇರಿಯಲ್ಲಿ ಭಾನುವಾರ ಸಭೆ ನಡೆಸಿದರು. ಪಕ್ಷದ ಪ್ರಮುಖರ ಸಮಿತಿ ಸದಸ್ಯರ ಜತೆಗೆ ಪ್ರತ್ಯೇಕ ಸಭೆ ನಡೆಸಿದರು.

‘ಪಕ್ಷದಲ್ಲಿ ನಾಯಕರ ನಡುವೆ ಒಗ್ಗಟ್ಟು ಇಲ್ಲ ಎಂಬುದು ಪದೇ–ಪದೇ ಜಗಜಾಹೀರು ಆಗುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷವಾಗಿದೆ. ಸರ್ಕಾರದ ವಿರುದ್ಧ ಹೋರಾಟಕ್ಕೆ ಹಲವು ಅವಕಾಶಗಳು ಇದ್ದರೂ, ಒಗ್ಗಟ್ಟು ಇಲ್ಲದ ಕಾರಣಕ್ಕೆ ಅವುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ರಾಜ್ಯ ನಾಯಕರನ್ನು ನಿತಿನ್ ಅವರು ತರಾಟೆಗೆ ತೆಗೆದುಕೊಂಡರು’ ಎಂದು ಪಕ್ಷದ ಮೂಲಗಳು ತಿಳಿಸಿವೆ.

‘ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಎಷ್ಟು ಹೋರಾಟ ನಡೆಸಿದ್ದೀರಿ? ಎಷ್ಟು ಹೋರಾಟಗಳನ್ನು ತಾರ್ಕಿತ ಅಂತ್ಯಮುಟ್ಟಿಸಿದ್ದೀರಿ? ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಗೆದ್ದರೆ ಸಾಕೇ? ಪಕ್ಷವನ್ನು ಗೆಲ್ಲಿಸಲು ಏನು ಮಾಡಿದ್ದೀರಿ? ರಾಜ್ಯದಲ್ಲಿ ಬಿಜೆಪಿ ಈವರೆಗೆ ಎರಡು ಬಾರಿ ಸರ್ಕಾರ ರಚಿಸಿದರೂ, ಸ್ವಂತ ಬಲದ ಸ್ವತಂತ್ರ ಸರ್ಕಾರವಾಗಿರಲಿಲ್ಲ. ಸಂಘಟನೆ ಸರಿಯಾಗಿ ಇರದೇ ಇದ್ದರೆ ಮುಂದೆಯೂ ಹೀಗೇ ಆಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ತಮಿಳುನಾಡಿನಲ್ಲಿ ಡಿಎಂಕೆ ವಿರುದ್ಧ ಆಡಳಿತ ವಿರೋಧಿ ಅಲೆ ಇತ್ತು. ಎಐಎಡಿಎಂಕೆ ಸುಲಭವಾಗಿ ಗೆಲ್ಲಲಿದೆ ಎಂದು ಎಣಿಸಲಾಗಿತ್ತು. ಆದರೆ ಟಿವಿಕೆ ಸ್ಪರ್ಧೆಗೆ ಇಳಿದ ಕಾರಣ ಚುನಾವಣಾ ಕಣವೇ ಬದಲಾಗಿ ಹೋಯಿತು. ಅಲ್ಲಿ ಎಐಎಡಿಎಂಕೆ ಮಾಡಿದ ತಪ್ಪನ್ನು ನೀವು ಕರ್ನಾಟಕದಲ್ಲಿ ಮಾಡಬಾರದು. ಎಲ್ಲರೂ ಬೀದಿಗಿಳಿದು ಹೋರಾಡಬೇಕು. ಪಕ್ಷದಲ್ಲಿ ಎಲ್ಲ ನಾಯಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜನರ ಬಳಿಗೆ ಹೋಗಬೇಕು’ ಎಂದು ಸೂಚಿಸಿದರು.

‘ರಾಜ್ಯ ಕಾಂಗ್ರೆಸ್ ಘಟಕವು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಲೇ ಅಧಿಕಾರಕ್ಕೆ ಬಂದು, ಈಗ ತಾನೇ ಅತೀವ ಭ್ರಷ್ಟಾಚಾರದಲ್ಲಿ ತೊಡಗಿದೆ. ಮುಖ್ಯಮಂತ್ರಿ ಆದಿಯಾಗಿ ಎಲ್ಲ ಸಚಿವರ ವಿರುದ್ಧವೂ ಭ್ರಷ್ಟಾಚಾರದ ಆರೋಪಗಳಿವೆ. ಜತೆಗೆ, ಜನರಿಗೆ ಕೊಟ್ಟ ಮಾತನ್ನು ಕಾಂಗ್ರೆಸ್ ಮರೆತಿದೆ. ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಇಷ್ಟು ಸಾಕು ಎಂದು ಭಾವಿಸಿದರೆ, ಬಿಜೆಪಿ ವಿರೋಧ ಪಕ್ಷದಲ್ಲಿಯೇ ಇರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು’ ಎಂದು ಮೂಲಗಳು ಹೇಳಿವೆ.

ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಜಿಲ್ಲಾ ಘಟಕದ ಅಧ್ಯಕ್ಷರು ಸಭೆಯಲ್ಲಿ ಭಾಗಿಯಾಗಿದ್ದರು. ಭಿನ್ನರ ಬಣದಲ್ಲಿ ಗುರುತಿಸಿಕೊಂಡಿದ್ದ ಶಾಸಕರಾದ ರಮೇಶ ಜಾರಕಿಹೊಳಿ, ಬಿ.ಪಿ.ಹರೀಶ್ ಅವರು ಹಾಜರಾಗಿದ್ದರು.

‘ಚುನಾವಣೆಗೆ ಸಿದ್ಧರಾಗಿ’

‘ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷವಿದೆ. ಆದರೆ ಅದಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಲು ನಮ್ಮ ಎದುರು ಹಲವು ಅವಕಾಶಗಳಿವೆ. ಹೀಗಾಗಿ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಿ ಎಂದು ನಿತಿನ್ ಅವರು ಪಕ್ಷದ ನಾಯಕರಿಗೆ ಸೂಚಿಸಿದರು’ ಎಂದು ಮೂಲಗಳು ತಿಳಿಸಿವೆ.

‘ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಜಿಬಿಎ ಪಾಲಿಕೆಗಳಿಗೆ ಮತ್ತು ವಿಧಾನ ಪರಿಷತ್ತಿನ ಸ್ಥಾನಗಳಿಗೆ ಚುನಾವಣೆ ಎದುರಿಸಬೇಕಿದೆ. ಈ ಎಲ್ಲ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಿದರೆ ವಿಧಾನಸಭೆ ಚುನಾವಣೆ ಹೊತ್ತಿಗೆ ಆತ್ಮವಿಶ್ವಾಸ ಹೆಚ್ಚಾಗಲಿದೆ’ ಎಂದು ತಿಳಿ ಹೇಳಿದ್ದಾರೆ.

‘ಎಲ್ಲ ಜಿಲ್ಲಾ ಘಟಕಗಳ ಅಧ್ಯಕ್ಷರೂ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಪಕ್ಷವನ್ನು ತಳಮಟ್ಟದಿಂದ ಇನ್ನಷ್ಟು ಗಟ್ಟಿಗೊಳಿಸಬೇಕು. ರಾಜ್ಯ ಘಟಕದ ನಾಯಕರು ಪಕ್ಷ ಸಂಘಟನೆ ಕಾರ್ಯದಲ್ಲಿ ತೊಡಗಿಕೊಳ್ಳ ಬೇಕು. ನಾನು ಇನ್ನೂ ಮೂರು ಬಾರಿ ರಾಜ್ಯಕ್ಕೆ ಭೇಟಿ ನೀಡುತ್ತೇನೆ. ಪಶ್ಚಿಮ ಬಂಗಾಳದಲ್ಲಿ ಗೆದ್ದ ಮಾದರಿಯಲ್ಲಿ ಇಲ್ಲೂ ಗೆಲ್ಲಬೇಕು ಎಂದು ತಿಳಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ವಿಶ್ವಾಸದ್ರೋಹಿ ಸರ್ಕಾರ: ನಿತಿನ್

‘ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ ಮೂರೂ ವರ್ಷಗಳಲ್ಲಿ ಜನರನ್ನು ವಂಚಿಸುವ ಕೆಲಸವನ್ನಷ್ಟೇ ಮಾಡಿದೆ’ ಎಂದು ನಿತಿನ್ ನವೀನ್ ಆರೋಪಿಸಿದರು.

ಪಕ್ಷದ ಪ್ರಮುಖರ ಸಮಿತಿ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು ‘ಕಾಂಗ್ರೆಸ್ ತನ್ನ ಒಳಜಗಳದ ಕಾರಣಕ್ಕೆ ರಾಜ್ಯದ ಜನರ ಹಿತವನ್ನು ಕಡೆಗಣಿಸಿದೆ. ಜನಹಿತಕ್ಕೂ ತನಗೂ ಸಂಬಂಧವೇ ಇಲ್ಲ ಎಂಬಂತೆ ಸರ್ಕಾರ ವರ್ತಿಸುತ್ತಿದೆ’ ಎಂದು ಟೀಕಿಸಿದರು.

‘ಭ್ರಷ್ಟಾಚಾರ ನಿರ್ಮೂಲನೆ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಾಯಕರು ಈಗ ತಾವೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ತಮಗಾಗಿ ಸರ್ಕಾರ ನಡೆಸುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಮೂಲೆಗೆ ತಳ್ಳಿದ್ದಾರೆ. ದೆಹಲಿಯ ಕಾಂಗ್ರೆಸ್ ತಂಡಕ್ಕೆ ಕರ್ನಾಟಕವು ಎಟಿಎಂ ಆಗಿದೆ’ ಎಂದು ಆಪಾದಿಸಿದರು.

ಸಾಲು ಸಾಲು ಕಾರ್ಯಕ್ರಮ

* ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಮನೆಯಲ್ಲಿ ಬೆಳಿಗ್ಗೆ ನಿತಿನ್ ನವೀನ್ ಅವರ ಉಪಾಹಾರ ಸಭೆ

* ಮಲ್ಲೇಶ್ವರದ ಕಾಡುಮಲ್ಲೇಶ್ವರ ದೇವಾಲಯಕ್ಕೆ ಭೇಟಿ

* ಲೋಕಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಅವರ ಭೇಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.