ಶಹಾಪುರ (ಯಾದಗಿರಿ): ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ರೈತರು, ಪಕ್ಷದ ನಾಯಕರ ಜೊತೆಗೆ ಶಹಾಪುರದಲ್ಲಿ ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ಶಹಾಪುರ ನಗರದ ಸಿಬಿ ಕಮಾನ್ ನಿಂದ ಹೊರಟು ಬಸವೇಶ್ವರ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆದು ಅಲ್ಲಿ ಬಹಿರಂಗ ಪ್ರತಿಭಟನಾ ಸಮಾವೇಶ ನಡೆಯಿತು.

ರಾಜ್ಯ ಸೇರಿ ಜಿಲ್ಲೆಯಲ್ಲಿ ವಕ್ಫ್ ಹೆಸರಿನಲ್ಲಿ ರೈತರ, ಮಠ ಮಾನ್ಯಗಳ ಸೇರಿದಂತೆ ಎಲ್ಲರ ಜಮೀನು ನುಂಗುವ ನಿಟ್ಟಿನಲ್ಲಿ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಹಾಗೂ ಮುಡಾ ಹಗರಣ, ನಿಗಮಗಳ ಹಗರಣಗಳು ಸೇರಿದಂತೆ ಸರ್ಕಾರದ ವೈಫಲ್ಯದ ವಿರುದ್ಧವೂ ಆಕ್ರೋಶ ವ್ಯಕ್ತವಾಯಿತು.

ತೆರದ ವಾಹನದಲ್ಲಿ ಹಲವು ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರ, ವಕ್ಫ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವರಾದ ಬೈರತಿ ಬಸವರಾಜ, ಶ್ರೀರಾಮುಲು, ರಾಜೂಗೌಡ, ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅಮೀನರಡ್ಡಿ ಯಾಳಗಿ, ಮಾಜಿ ಅಧ್ಯಕ್ಷ ಡಾ.ಶರಣ ಭೂಪಾಲರೆಡ್ಡಿ ನಾಯ್ಕಲ್, ಅರೆ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ದೇವೇಂದ್ರನಾಥ ನಾದ್,

ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮಾ, ಜಿಲ್ಲಾ ಖಜಾಂಚಿ ತಿರುಪತಿ ರೆಡ್ಡಿ, ಯಾದಗಿರಿ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ನಗರ ಮಂಡಲ ಲಿಂಗಪ್ಪ ಹತ್ತಿಮನಿ, ಮೌನೇಶ ಬೆಳಗೇರಾ, ಸೇರಿದಂತೆ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ಹಾಸನದಲ್ಲಿ ಯಾವ ಪುರುಷಾರ್ಥಕ್ಕಾಗಿ ಸಮಾವೇಶ?

ಹಾಸನದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಸಮಾವೇಶ ಯಾವ ಪುರುಷಾರ್ಥಕ್ಕಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಮಾಡುವ ಸರ್ಕಸ್ ಇದಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದರು.

ಶಹಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಕುರ್ಚಿಗಾಗಿ ಗುದ್ದಾಟ ನಡೆದಿದೆ. ಜನತೆಯ ಸಮಸ್ಯೆ ಬದಿಗೊತ್ತಿ ಇವರು ಸಮಾವೇಶ ನಡೆಸುತ್ತಿದ್ದಾರೆ. ಮುಡಾ ಹಗರಣ ಮರೆ ಮಾಚಲು ನಡೆಸುತ್ತಿರುವ ವ್ಯರ್ಥ ಸರ್ಕಸ್ ಇದಾಗಿದೆ ಎಂದು ವ್ಯಂಗ್ಯವಾಡಿದರು .

ವಿಜಯಪುರ ಶಾಸಕ ಬಸವರಾಜ ಪಾಟೀಲ ಯತ್ನಾಳ ಅವರ ತಂಡ ನಡೆಸಿರುವ ಹೋರಾಟದ ಕುರಿತು ಪ್ರತಿಕ್ರಿಯಿಸಿ ಕಾಯ್ದು ನೋಡಿ ಕಾಲವೇ ಉತ್ತರಿಸುತ್ತದೆ ಎಂದು ಹಾರಿಕೆ ಉತ್ತರ ನೀಡಿದರು.

ಹಲಗೆ ಬಾರಿಸಿ ಗಮನಸೆಳೆದ ರಾಜೂಗೌಡ

ನಮ್ಮ ಭೂಮಿ ನಮ್ಮ ಹಕ್ಕು ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆ ಮೆರವಣಿಗೆಯಲ್ಲಿ ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಹಲಗೆ ಬಾರಿಸುತ್ತಾ ಕಾರ್ಯಕರ್ತರನ್ನು ಹುರಿದುಂಬಿಸಿ ಗಮನ ಸೆಳೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.