ಬೆಂಗಳೂರು: ಮುಸ್ಲಿಂ ಸ್ಪೀಕರ್ ಮುಂದೆ ಬಿಜೆಪಿಯವರು ನಮಸ್ಕಾರ ಸಾಬ್ ಎಂದು ಕೈ ಮುಗಿದು ನಿಲ್ಲುವಂತೆ ಮಾಡಿರುವುದು ಕಾಂಗ್ರೆಸ್ ಪಕ್ಷ ಎಂದು ವಸತಿ ಸಚಿವ ಜಮೀರ್ ಅಹಮದ್ ತೆಲಂಗಾಣ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆಯಲ್ಲಿ ನೀಡಿರುವ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಮತೀಯ ಲೇಪನ ಹಚ್ಚಿರುವುದು ಖಂಡನೀಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಎಂ.ಪಿ.ರೇಣುಕಾಚಾರ್ಯ, ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಜಮೀರ್ ಹೇಳಿಕೆಯನ್ನು ಆಕ್ಷೇಪಿಸಿದ್ದಾರೆ.

‘ಎಲುಬಿಲ್ಲದ ನಾಲಗೆ ಏನೇನೋ ಮಾತಾಡೋದಲ್ಲ. ಖಾದರ್ಗೆ ತಲೆ ಬಾಗಲ್ಲ. ಸಭಾಧ್ಯಕ್ಷ ಸ್ಥಾನಕ್ಕೆ ಗೌರವ ಕೊಡ್ತೇವೆ. ಆ ಸ್ಥಾನದಲ್ಲಿ ಯಾರೇ ಇದ್ದರೂ ಗೌರವ ಕೊಡಬೇಕಾಗಿದ್ದು ಶಾಸಕರ ಕರ್ತವ್ಯ. ನಿಮ್ಮ ಬಾಯಿಂದ ಬರುವ ಮಾತಿನಿಂದ ಕೋಮಿ ಘರ್ಷಣೆ ಸೃಷ್ಟಿಯಾಗುತ್ತದೆ‘ ಎಂದು ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಸಿಎಂ ಬುದ್ದಿ ಹೇಳಲಿ:

ಸಂವಿಧಾನಕ್ಕೆ ಅಗೌರವ ಕೊಡುವ ಹೇಳಿಕೆ ನೀಡಿರುವ ಜಮೀರ್ ಅವರನ್ನು ಕರೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುದ್ದಿ ಮಾತು ಹೇಳಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಒತ್ತಾಯಿಸಿದರು.

ಜಮೀರ್ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಪ್ರಜಾಪ್ರಭುತ್ವದಲ್ಲಿ ವಿಧಾನಸಭೆ ಮತ್ತು ಪರಿಷತ್ತಿನಲ್ಲಿ ಸಭಾಧ್ಯಕ್ಷರ ಸ್ಥಾನ ಬಹಳ ದೊಡ್ಡದ್ದು ಮತ್ತು ಗೌರವಯುತವಾದುದು. ಪೀಠದಲ್ಲಿ ಯಾರು ಕುಳಿತುಕೊಳ್ಳುತ್ತಾರೆ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆಯಂತೆ ನಡೆಯುತ್ತದೆ. ಬಿಜೆಪಿಯವರು ಮುಸ್ಲಿಂ ಸಮುದಾಯದ ಖಾದರ್ ಅವರಿಗೆ ನಮಸ್ಕಾರ ಮಾಡುವ ಸ್ಥಿತಿಯನ್ನು ಕಾಂಗ್ರೆಸ್ ತಂದಿದೆ ಎಂಬ ಹೇಳಿಕೆ ಪ್ರಜಾತಂತ್ರಕ್ಕೆ ಶೋಭೆ ತರುವುದಿಲ್ಲ ಎಂದು ತಿಳಿಸಿದರು.

ಸಭಾಧ್ಯಕ್ಷರ ಪೀಠಕ್ಕೆ ನೀಡುವ ಗೌರವವನ್ನು ಚುನಾವಣೆ ಸಂದರ್ಭದಲ್ಲಿ ಬಾಲಿಶವಾಗಿ ಬಳಸುತ್ತಿರುವುದು ಅವರ ಅಪ್ರಬುದ್ಧತೆಯನ್ನು ತೋರಿಸುತ್ತದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.