ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ಮಂಗಳವಾರ ದೂರು ನೀಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಇದು ಅಧಿಕಾರ ದುರುಪಯೋಗ. ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಜಮೀನು ವಾಪಸ್ ಪಡೆಯಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಕೈಗಾರಿಕಾ ನಿವೇಶನ ಪಡೆಯುವ ಹಕ್ಕು ಎಲ್ಲರಿಗೂ ಇದೆ. ಆದರೆ, ನಾಗರಿಕ ಸೌಲಭ್ಯದ (ಸಿಎ) ನಿವೇಶನ ಪಡೆಯಲು ಕೆಲವು ನಿಯಮಗಳಿವೆ. ಸಾಮಾಜಿಕ ಚಟುವಟಿಕೆ, ರಂಗಮಂದಿರ, ಆಸ್ಪತ್ರೆಗಳಿಗೆ ನೀಡಬೇಕು. ಆದರೆ, ಇತರ ಅರ್ಜಿಗಳನ್ನು ತಿರಸ್ಕರಿಸಿ, ಖರ್ಗೆ ಕುಟುಂಬಕ್ಕೆ ನೀಡಲಾಗಿದೆ ಎಂದು ದೂರಿದ್ದಾರೆ.