ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಪ ಚುನಾವಣೆ: ಬಿಜೆಪಿ ಉಸ್ತುವಾರಿಗಳ ನೇಮಕ

Published 6 ಜುಲೈ 2024, 21:21 IST
Last Updated 6 ಜುಲೈ 2024, 21:21 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್ ಉಪ ಚುನಾವಣೆಗಳಿಗೆ ಕ್ಷೇತ್ರವಾರು ಉಸ್ತುವಾರಿಗಳನ್ನು  ಪಕ್ಷದ ರಾಜ್ಯಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇಮಿಸಿದ್ದಾರೆ.

ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಪಕ್ಷದ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್‌, ಶಾಸಕರಾದ ಅರವಿಂದ್‌ ಬೆಲ್ಲದ್‌, ಮಹೇಶ್‌ ಟೆಂಗಿನಕಾಯಿ, ಸಂಡೂರಿಗೆ ಸಂಸದ ಗೋವಿಂದ ಕಾರಜೋಳ, ಶಾಸಕ ವಿ. ಸುನೀಲ್‌ಕುಮಾರ್, ವಿಧಾನ ಪರಿಷತ್‌ ಸದಸ್ಯರಾದ ಎನ್‌. ರವಿಕುಮಾರ್, ಕೆ.ಎಸ್‌. ನವೀನ್‌, ಚನ್ನಪಟ್ಟಣಕ್ಕೆ ಶಾಸಕರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಎಂ. ಕೃಷ್ಣಪ್ಪ, ವಿಧಾನ ಪರಿಷತ್‌ ಸದಸ್ಯ ಎಚ್‌.ಎಸ್‌. ಗೋಪಿನಾಥ ರೆಡ್ಡಿ, ಪಕ್ಷದ ಪ್ರಧಾನ ಕಾರ್ಯದರ್ಶಿ ನಂದೀಶ್‌ ರೆಡ್ಡಿ ಅವರನ್ನು ನೇಮಿಸಲಾಗಿದೆ. 

ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ ಸ್ಥಾನಕ್ಕೆ (ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ) ನಡೆಯುವ ಉಪ ಚುನಾವಣೆಗೆ ಸಂಸದರಾದ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಬೃಜೇಶ್‌ ಚೌಟ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು ಉಸ್ತುವಾರಿಗಳಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT