ಬೆಂಗಳೂರು: ಭಾರತವು ಸೆಮಿಕಂಡಕ್ಟರ್ ಕ್ಷೇತ್ರ, ನವೋದ್ಯಮ, ಡಿಜಿಟಲ್ ನಾವೀನ್ಯತೆ ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ಹೊಸ ಮೈಲುಗಲ್ಲುಗಳನ್ನು ಸೃಷ್ಟಿಸಿದೆ. ಇದರಿಂದ ಯುವ ಜನರಿಗೆ ಹೆಚ್ಚು ಅವಕಾಶಗಳು ಸೃಷ್ಟಿ ಆಗಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಹೇಳಿದ್ದಾರೆ.

‘ಯೂತ್ ಫಾರ್ ನೇಷನ್’ ಆಯೋಜಿಸಿದ್ದ ‘ಯುವ ಮನಸ್ಸುಗಳೊಂದಿಗೆ ಸಂವಾದ’ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಎತ್ತರವನ್ನು ತಲುಪುತ್ತಿದೆ. ಈ ಮೂಲಕ ನಮ್ಮ ಯುವ ಜನತೆಗೆ ಹಿಂದೆಂದೂ ಕಾಣದಂತಹ ಅವಕಾಶಗಳು ಸೃಷ್ಟಿಯಾಗಿವೆ’ ಎಂದರು.

‘ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಯುವ ಜನರ ಆಕಾಂಕ್ಷೆಗಳಿಗೆ ದ್ರೋಹ ಬಗೆದಿದೆ. ಕಾಂಗ್ರೆಸ್ ಆಡಳಿತದಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ಮತ್ತು ದುರಾಡಳಿತವು, ಭಾರತದ ಯುವ ಜನತೆಯ ಭವಿಷ್ಯ ಮತ್ತು ಸಾಮರ್ಥ್ಯದ ಬಗ್ಗೆ ಕಾಂಗ್ರೆಸ್ ಪಕ್ಷಕ್ಕಿರುವ ಸಂಪೂರ್ಣ ದೂರದೃಷ್ಟಿಯ ಕೊರತೆಯನ್ನು ಬಟಾಬಯಲು ಮಾಡಿದೆ’ ಎಂದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಮತ್ತು ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-2079829356

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.