ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಜಯ ಗಳಿಸಿದ್ದರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುವ ಸಂಭವ ಇದೆ. ಅದಕ್ಕೂ ಮೊದಲು ಕರ್ನಾಟಕ, ಉತ್ತರ ಪ್ರದೇಶ ಹಾಗೂ ರಾಜಸ್ಥಾನ ರಾಜ್ಯ ಘಟಕಗಳ ಅಧ್ಯಕ್ಷರ ಚುನಾವಣೆ ನಡೆಯಲಿದೆ.

ಈ ಬಗ್ಗೆ ಸುಳಿವು ಪಡೆದಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇದೇ 22 ಹಾಗೂ 23ರಂದು ದೆಹಲಿ ಪ್ರವಾಸ ಕೈಗೊಂಡು ಪಕ್ಷದ ವರಿಷ್ಠರನ್ನು ಕಾಣಲಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷರಾಗಿ ಈಚೆಗಷ್ಟೇ ಎರಡು ವರ್ಷ ಪೂರ್ಣಗೊಳಿಸಿರುವ ವಿಜಯೇಂದ್ರ ಅವರು, ರಾಜ್ಯ ಘಟಕದಲ್ಲಿನ ಗೊಂದಲವನ್ನು ಶೀಘ್ರ ಬಗೆಹರಿಸುವಂತೆ ವಿನಂತಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.