ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ: ಅಶೋಕ ಸೇರಿ 43 ಮಂದಿ ವಿರುದ್ಧ ಪ್ರಕರಣ

Published 6 ಜನವರಿ 2024, 14:26 IST
Last Updated 6 ಜನವರಿ 2024, 14:26 IST
ಅಕ್ಷರ ಗಾತ್ರ

ಹುಬ್ಬಳ್ಳಿ: 1992ರ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ, ನಗರದ ಶಹರ ಪೊಲೀಸ್‌ ಠಾಣೆ ಎದುರು ಜ. 3ರಂದು ಪ್ರತಿಭಟನೆ ನಡೆಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಸೇರಿ 43 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

‘ಪ್ರತಿಭಟನೆ ವೇಳೆ ಮುಖ್ಯಮಂತ್ರಿ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಘೋಷಣೆ ಕೂಗಿ, ಪ್ರಚೋದನಕಾರಿ ಭಾಷಣ ಮಾಡಿದ್ದಾರೆ’ ಎಂದು ಹು–ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಲ್ತಾಫ್‌ ಹಳ್ಳೂರು ಜ. 5ರಂದು ದೂರು ನೀಡಿದ್ದರು.

ಆರ್‌. ಅಶೋಕ ಎ1 ಆರೋಪಿಯಾಗಿದ್ದರೆ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಮತ್ತು ಎಂ.ಆರ್‌. ಪಾಟೀಲ ಕ್ರಮವಾಗಿ ಎ2, ಎ3 ಮತ್ತು ಎ 7 ಆರೋಪಿಯಾಗಿದ್ದಾರೆ. ವಿಧಾನಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್‌ ಎ8 ಆರೋಪಿಯಾಗಿದ್ದಾರೆ. ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ್‌, ಶಿವು ಮೆಣಸಿನಕಾಯಿ, ರೂಪಾ ಶೆಟ್ಟಿ, ಉಮೇಶಗೌಡ ಕೌಜಲಗಿ, ತಿಪ್ಪಣ್ಣ ಮಜ್ಜಗಿ ಸೇರಿದಂತೆ ಬಿಜೆಪಿಯ ಇತರ ಮುಖಂಡರ ಹಾಗೂ ಕಾರ್ಯಕರ್ತರ ವಿರುದ್ಧ ಎನ್‌ಸಿ(ಸಂಜ್ಞೆ ಅಪರಾಧ–ಗುರುತಿಸಲಾಗದ ಅಪರಾಧಗಳು) ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿದೆ?: ‘ರೌಡಿ ಶ್ರೀಕಾಂತ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ಮುಖಂಡರು ಜ. 3ರಂದು ಶಹರ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸುವಾಗ, ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಘೋಷಣೆ ಕೂಗಿದ್ದಾರೆ. ಮುಖ್ಯಮಂತ್ರಿಗೆ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ಅವಾಚ್ಯ ಪದಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ. ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿ ನಾಗರಿಕ ವಿರೋಧಿ ಚಟುವಟಿಕೆ ನಡೆಸಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT