ಬೆಂಗಳೂರು: ‘ಬಿಜೆಪಿಯಿಂದ ಕೋಮು ಗಲಬೆ ನಡೆಸುವ ಫತ್ವಾ ಬಂದಿದೆ ಎಂದು ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಎಂಬ ಮತಾಂಧ ತಾನೇ ಸೃಷ್ಟಿಸಿರುವ ‘ರಾಷ್ಟ್ರ ರಕ್ಷಣಾ ಪಡೆ’ ಎಂಬ ವಾಟ್ಸ್‌ಆ್ಯಪ್ ಗ್ರೂಪಿನಲ್ಲಿ ಹೇಳಿಕೊಂಡಿದ್ದಾನೆ. ಕೋಮು ಗಲಭೆ ನಡೆಸಿ 2024ಕ್ಕೆ ‘ವಿಶ್ವಗುರು’ವನ್ನು ಮತ್ತೆ ಪ್ರಧಾನಿಯಾಗಬೇಕೆಂದು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ’ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

‘ರಾಷ್ಟ್ರ ರಕ್ಷಣಾ ಪಡೆ’ ಎಂಬ ವಾಟ್ಸ್‌ಆ್ಯಪ್ ಗ್ರೂಪಿನಲ್ಲಿರುವ ಕೆರೆಹಳ್ಳಿಯ ಹೇಳಿಕೆ ಸಹಿತ ‘ಎಕ್ಸ್’ ಮಾಡಿರುವ ಹರಿಪ್ರಸಾದ್, ‘ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ತನ್ನ ಸಹೋದರ ಸಂಘಟನೆಗಳನ್ನು ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ’ ಎಂದು ಟೀಕಿಸಿದ್ದಾರೆ.

‘ರಾಜ್ಯದಲ್ಲಿ ಎಲ್ಲಿ, ಯಾವಾಗ, ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಬಿಜೆಪಿ ಇಂತಹ ಸಮಾಜಘಾತುಕರ ಬೆಂಬಲಕ್ಕೆ ನಿಂತಿರುವುದು ಜಗಜ್ಜಾಹೀರು. ಕೂಡಲೇ ಸರ್ಕಾರ ಇಂತಹ ಭಯೋತ್ಪಾದಕ ಶಕ್ತಿಗಳನ್ನು ಮಟ್ಟ ಹಾಕಬೇಕು. ರಾಜ್ಯದ ಆಂತರಿಕ ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿರುವವರ ಮೇಲೆ ರಾಷ್ಟ್ರದ್ರೋಹದ ಅಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸಬೇಕು’ ಎಂದೂ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್‌ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.