ಬೆಂಗಳೂರು:ಮಹಾತ್ಮಾ ಗಾಂಧಿ ಮತ್ತು ಅವರ ಮಗನ ಉದಾಹರಣೆ ಕೊಟ್ಟು. ಅದೇ ರೀತಿ ಎಸ್.ಆರ್. ಬೊಮ್ಮಾಯಿ ಅವರ ಗುಣ ಬಸವರಾಜ ಬೊಮ್ಮಾಯಿ ಅವರಿಗೆ ಬರುತ್ತವೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರಾಜ್ಯ ಬಿಜೆಪಿ, ಅವರ ಮಕ್ಕಳ ಉದಾಹರಣೆ ಕೊಟ್ಟು ಟ್ವೀಟ್ ಮಾಡಿದೆ.

ಸಿದ್ದರಾಮಯ್ಯ ಹೇಳಿದ್ದೇನು?:‘ಮಹಾತ್ಮ ಗಾಂಧಿ ಬಹಳ ಒಳ್ಳೆಯವರು. ಆದರೆ, ಮಗ ಕುಡುಕನಾದ. ಹಾಗೆಯೇ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಗುಣಗಳು ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ತಂದೆಯ ಗುಣ ಕೆಲ ಮಕ್ಕಳಿಗೆ ಬರುವುದಿಲ್ಲ.’ ಎಂದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ,ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕುಡಿದ ಮತ್ತಿನಲ್ಲಿ ಹಿರಿಯರ ಮೇಲೂ ದೌರ್ಜನ್ಯ ಎಸಗಿದ ಬಗ್ಗೆ ಸುದ್ದಿಯಾಗಿತ್ತು.

ಇದೆಲ್ಲ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ ಎಂದು ಪ್ರಶ್ನಿಸಿದೆ.

ಇದೇವೇಳೆ, ಪ್ರಾಮಾಣಿಕವಾಗಿ ಹೇಳಿ ಸಿದ್ದರಾಮಯ್ಯನವರೇ, ನಿಮ್ಮ ಪುತ್ರ, ಡಾ. ಯತೀಂದ್ರ ಅವರಿಗೆ ನಿಮ್ಮ ಗುಣ ಎಷ್ಟು ಬಂದಿದೆ? ಸಾಮಾನ್ಯವಾಗಿ ತಂದೆಯಿಂದ ಮಗನಿಗೆ ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ. ಸಂಸ್ಕಾರ, ಗುಣ, ಸಾಮರ್ಥ್ಯ ಅವರವರ ಗಳಿಕೆ ಎಂಬುದನ್ನು ಅರ್ಥೈಸಿಕೊಳ್ಳಿ ಎಂದು ಟ್ವೀಟ್ ಮಾಡಿರುವ ಬಿಜೆಪಿ, #ಮಜವಾದಿಸಿದ್ದರಾಮಯ್ಯ ಎಂದು ಹ್ಯಾಶ್ ಟ್ಯಾಗ್ ಕೊಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.