ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲಡಿ ನೋಟುಗಳ ರಾಶಿ: ಸಚಿವ ಶಿವಾನಂದ ಪಾಟೀಲ ವಜಾಕ್ಕೆ ಬಿಜೆಪಿ ಆಗ್ರಹ

Published 18 ಅಕ್ಟೋಬರ್ 2023, 15:57 IST
Last Updated 18 ಅಕ್ಟೋಬರ್ 2023, 15:57 IST
ಅಕ್ಷರ ಗಾತ್ರ

ನವದೆಹಲಿ: ತೆಲಂಗಾಣದಲ್ಲಿ ಮದುವೆಯೊಂದರಲ್ಲಿ ಸಚಿವ ಶಿವಾನಂದ ಪಾಟೀಲ ಅವರಿಗೆ ನೋಟುಗಳ ಮಳೆಗರೆದ ಕುರಿತ ವಿಷಯ ಪ್ರಸ್ತಾಪಿಸಿದ ಬಿಜೆಪಿ ವಕ್ತಾರ ಗೌರವ ಭಾಟಿಯಾ, ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಹಣ ಬಳಸಿಕೊಂಡು ಪ್ರಜಾಪ್ರಭುತ್ವ ಮತ್ತು ಚುನಾವಣೆಗಳನ್ನು ಅಪವಿತ್ರಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ. 

ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿಡಿಯೊದಲ್ಲಿರುವುದು ತಾವೇ ಎಂದು ಪಾಟೀಲ್ ಒಪ್ಪಿಕೊಂಡಿದ್ದಾರೆ . ಆದರೆ ಕಾಂಗ್ರೆಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.  

ಇಂತಹ ‘ಭ್ರಷ್ಟ’ ಸಚಿವರ ಮುಂದುವರಿಕೆ ಪ್ರಜಾಪ್ರಭುತ್ವಕ್ಕೆ ಅಪಾಯವಾಗಿರುವುದರಿಂದ ಅವರನ್ನು ಕೂಡಲೇ ವಜಾಗೊಳಿಸಬೇಕು ಪ್ರಾಮಾಣಿಕ ಪ್ರಧಾನಿ ನಾಯಕತ್ವದಲ್ಲಿ ಬಿಜೆಪಿ ಜನರಿಗೆ ಸೇವೆ ಸಲ್ಲಿಸುತ್ತಿದ್ದರೆ, ಮತ್ತೊಂದೆಡೆ ಭಾರಿ ಭ್ರಷ್ಟ ಕಾಂಗ್ರೆಸ್ ಇದೆ. ಭ್ರಷ್ಟಾಚಾರ ಕಾಂಗ್ರೆಸ್‌ ಡಿಎನ್ಎಯಲ್ಲಿದೆ ಎಂದು ಅವರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT