ಬೆಂಗಳೂರು: ‘ಶೃಂಗೇರಿ ಶಾಸಕ ಡಿ.ಎನ್. ಜೀವರಾಜ್ ಅವರಿಗೆ ಪ್ರಮಾಣ ಬೋಧಿಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿಳಂಬ ಮಾಡುತ್ತಿ ದ್ದಾರೆ. ಆದ್ದರಿಂದ, ಪ್ರಮಾಣ ವಚನ ಬೋಧಿಸುವಂತೆ ರಾಜ್ಯಪಾಲರನ್ನೇ ಕೋರಿದ್ದೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಈ ವಿಚಾರವಾಗಿ ಮಂಗಳವಾರ ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಸಭಾಧ್ಯಕ್ಷರು ಸಂವಿಧಾನದ ಪ್ರಕಾರ ಪ್ರಮಾಣ ವಚನ ಪ್ರಕ್ರಿಯೆ ನಡೆಸದೇ ಇದ್ದರೆ, ಅವರ ವಿರುದ್ಧ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

‘ಮರು ಮತ ಎಣಿಕೆಯಲ್ಲಿ ಜೀವರಾಜ್ ಗೆಲುವು ಸಾಧಿಸಿದ ಬಳಿಕ ಚುನಾವಣಾ ಆಯೋಗ ಪ್ರಮಾಣ ಪತ್ರ ನೀಡಿದೆ. ರಾಜ್ಯ ಸರ್ಕಾರ ರಾಜ್ಯಪತ್ರದಲ್ಲೂ ಇದನ್ನು ಪ್ರಕಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಎಲ್ಲ ಶಾಸಕರಿಗೂ ಒಂದೇ ಕಾನೂನು ಇರುವುದು. ಈ ಕುರಿತು ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಲು ಯತ್ನಿಸಿದರೆ, ಬೇಕೆಂದೇ ಕರೆ ಸ್ವೀಕರಿಸಲಿಲ್ಲ. ಈಗ ಭೇಟಿ ಮಾಡಿದರೆ ನನಗೆ ಕಾನೂನು ಬೋಧನೆ ಮಾಡುತ್ತಿದ್ದಾರೆ’ ಎಂದು ಅಶೋಕ ಕಿಡಿಕಾರಿದರು.

ಯು.ಟಿ.ಖಾದರ್ ಕೂಡ ಶಾಸಕರಾಗಿ ಹಂಗಾಮಿ ಸಭಾಧ್ಯಕ್ಷರ ಮೂಲಕವೇ ಪ್ರಮಾಣ ಸ್ವೀಕರಿಸಿದ್ದಾರೆ. ಅವರೇನೂ ನ್ಯಾಯಾಲಯಕ್ಕೆ ಹೋಗಿಲ್ಲ. ಯಾವುದೇ ಶಾಸಕರ ವಿರುದ್ಧ ನ್ಯಾಯಾಲಯಕ್ಕೆ ಹೋಗಲು 45 ದಿನಗಳ ಕಾಲಾವಕಾಶವಿದ್ದರೂ ಪ್ರಮಾಣ ವಚನ ಪಡೆಯಲು ಅಡ್ಡಿ ಇಲ್ಲ. ಆದರೆ ಸಭಾಧ್ಯಕ್ಷ ಖಾದರ್ ಮಾತ್ರ ಪ್ರಮಾಣ ವಚನಕ್ಕೆ ಅವಕಾಶ ಮಾಡಿಕೊಡದೇ ಹೊಸ ಸಂಪ್ರದಾಯ ಆರಂಭಿಸಿದ್ದಾರೆ ಎಂದು ದೂರಿದರು.

ಜೀವರಾಜ್ ಅವರ ವಿರುದ್ಧದ ದೂರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ. ಕಾಂಗ್ರೆಸ್ನವರೇ ದೊಡ್ಡ ಡಕಾಯಿತಿ ಮಾಡುತ್ತಾರೆ. ಮತ ಎಣಿಕೆ ವೇಳೆ ಚುನಾವಣಾಧಿಕಾರಿಗೆ ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಕರೆ ಮಾಡಿ ಒತ್ತಡ ಹೇರಿದ್ದಾರೆಯೇ ಎಂಬುದರ ಬಗ್ಗೆ ಸಿಬಿಐ ತನಿಖೆ ಆಗಬೇಕಾಗಿದೆ ಎಂದರು.

ಮರು ಎಣಿಕೆ ಫಲಿತಾಂಶವನ್ನು ಕೋರ್ಟ್ಗೆ ಸಲ್ಲಿಸಿ ಎಂದು ಎಲ್ಲೂ ಹೇಳಿಲ್ಲ. ಫಲಿತಾಂಶವನ್ನು ಕೂಡಲೇ ಪ್ರಕಟಿಸಿ ಎಂಬ ಸೂಚನೆ ಇದೆ. ಸಭಾಧ್ಯಕ್ಷರನ್ನು ಭೇಟಿಯಾಗಿ ಕೇಳಿದರೆ, ನಾಳೆ ಬಾ ನೋಡೋಣ, ಕಾನೂನು ಸಲಹೆ ಪಡೆಯಬೇಕಿದೆ ಎನ್ನುತ್ತಾರೆ ಎಂದರು.

‘ಸಂವಿಧಾನದ ವಿಧಿ 188 ರ ಪ್ರಕಾರ, ಪ್ರಮಾಣ ವಚನವನ್ನು ರಾಜ್ಯಪಾಲರು ಬೋಧಿಸುತ್ತಾರೆ. ಸಭಾಧ್ಯಕ್ಷರು ಇರದಿದ್ದರೆ ಬೇರೆಯವರ ಹೆಸರು ಸೂಚಿಸುವ ಅಧಿಕಾರ ರಾಜ್ಯಪಾಲರಿಗಿದೆ. ಸಭಾಧ್ಯಕ್ಷರ ಬದಲು ನೀವೇ ಪ್ರಮಾಣ ವಚನ ಬೋಧಿಸಿ ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಹೀಗೆ ಮಾಡಿದ್ದಾಗ ಇಬ್ಬರು ಬಿಜೆಪಿ ಶಾಸಕರು ರಾಜ್ಯಪಾಲರಿಗೆ ಕೋರಿದ್ದರು. ಅದೇ ರೀತಿ ನಾವು ಕೋರಿದ್ದೇವೆ. ಈ ಪ್ರಕ್ರಿಯೆ ನಡೆಯದೇ ಇದ್ದಲ್ಲಿ ಸ್ಪೀಕರ್ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.

‘ಮತಪತ್ರ ತಿರುಚಲಾಗಿದೆ ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ. ಜೀವರಾಜ್ ಸೋತು ಎಂಟು ವರ್ಷ ಆಗಿದೆ. ಅವರ ಮಾತನ್ನು ಅಧಿಕಾರಿಗಳು ಕೇಳಲು ಸಾಧ್ಯವೇ? ಅಧಿಕಾರಿಗಳು ಮುಖ್ಯಮಂತ್ರಿ ಮಾತು ಕೇಳುತ್ತಾರೆ. ಶೃಂಗೇರಿ ಕ್ಷೇತ್ರ ಮತ ಕಳವಿಗೆ ಉದಾಹರಣೆಯಾಗಿದ್ದು, ಇಡೀ ಸರ್ಕಾರವನ್ನೇ ವಜಾ ಮಾಡಬೇಕಾಗಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-1687894130

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.