‘ಈ ಸೋಲಿನ ಅವಲೋಕನ ಸಭೆಗಳಿಗೆ ಜೋಶಿ, ಸಂತೋಷ್ ಅವರುಗಳು ಬಾಗವಹಿಸದೆ, ತಮ್ಮ ಶಿಷ್ಯಪಡೆಯನ್ನು ಮುಂದೆ ಬಿಟ್ಟಿರುವುದೇಕೆ?‘ ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಅಲ್ಲದೇ. ಹೀನಾಯ ಸೋಲಿಗೆ ಅವರಿಬ್ಬರೇ ಕಾರಣರಲ್ಲವೇ, ಅವರೇ ಇಲ್ಲದಿದ್ದರೆ ಹೇಗೆ? ಎಂದು ಪಶ್ನಿಸಿದೆ.
‘ಬಿಜೆಪಿಯ ಒಂದು ಬಣ ಹೊಂದಾಣಿಕೆ ರಾಜಕೀಯದಿಂದ ನಮಗೆ ಸೋಲಾಯಿತು ಎನ್ನುತ್ತಿದೆ. ಮತ್ತೊಂದು ಬಣ ಕಾಂಗ್ರೆಸ್ ಗ್ಯಾರಂಟಿಗಳಿಂದ ನಮಗೆ ಸೋಲಾಯ್ತು ಎನ್ನುತ್ತಿದೆ. ಎರಡೂ ಬಣದವರು ಸತ್ಯ ಹೇಳಲು, ಒಪ್ಪಿಕೊಳ್ಳಲು ತಯಾರಿಲ್ಲ. ಶೇ 40 ಕಮಿಷನ್ ಭ್ರಷ್ಟಾಚಾರದಿಂದ, ದುರಾಡಳಿತದಿಂದ, ಜನಪರ ಚಿಂತನೆಗಳು ಇಲ್ಲದಿರುವುದರಿಂದ, ಹಗರಣಗಳಿಂದ ಸೋಲಾಗಿದ್ದನ್ನು ಒಪ್ಪಿಕೊಳ್ಳದಿದ್ದರೆ ಬಿಜೆಪಿಯದ್ದು ಆತ್ಮಾವಲೋಕನ ಆಗುವುದಿಲ್ಲ. ಆತ್ಮ ವಂಚಕತನ ಆಗುತ್ತದೆ‘ ಎಂದು ಕಾಂಗ್ರೆಸ್ ಛೇಡಿಸಿದೆ.