ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆ: ಇಂದು ಬಿಜೆಪಿ ಅವಲೋಕನಾ ಸಭೆ

Published 11 ಮೇ 2024, 0:07 IST
Last Updated 11 ಮೇ 2024, 0:07 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ನಿರ್ವಹಣೆಯ ಕುರಿತ ಅವಲೋಕನ ಸಭೆಯನ್ನು ಬಿಜೆಪಿ ಶನಿವಾರ ಹಮ್ಮಿಕೊಂಡಿದೆ.

ಕಳೆದ ಬಾರಿ 25 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಈ ಬಾರಿಯೂ ಗರಿಷ್ಠ ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಂಡು ಕಣಕ್ಕೆ ಇಳಿದಿತ್ತು. ಅಂತಿಮವಾಗಿ 28 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಮತ್ತು ಇತರ ವಿಚಾರಗಳ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ಬಿಜೆಪಿಯ ನಾಯಕರೊಬ್ಬರು ತಿಳಿಸಿದರು.

ಯಾವ ಕ್ಷೇತ್ರಗಳಲ್ಲಿ ಸುಲಭವಾಗಿ ಗೆಲ್ಲಬಹುದು, ಎಲ್ಲೆಲ್ಲಿ ಕಠಿಣ ಸ್ಪರ್ಧೆ ಎದುರಾಗಿದೆ. ಯಾವ ಕಾರಣಕ್ಕೆ ಕಠಿಣ ಪರಿಸ್ಥಿತಿ ಎದುರಾಗಿದೆ. ಕೊನೆ ಕ್ಷಣಗಳಲ್ಲಿ ಆಗಿರುವ ವ್ಯತ್ಯಾಸಗಳೇನು? ತಳ ಮಟ್ಟದಲ್ಲಿ ಪ್ರಚಾರ ಮತ್ತು ಮತದಾರರ ಸಂಪರ್ಕದ ಬಗ್ಗೆಯೂ ಮಾಹಿತಿ ಪಡೆಯಲಾಗುವುದು. ಇವೆಲ್ಲವನ್ನು ಆಧರಿಸಿ ಪಕ್ಷದ ವರಿಷ್ಠರಿಗೆ ಒಂದು ವರದಿಯನ್ನು ಸಲ್ಲಿಸಲಾಗುವುದು. ಈ ಬಾರಿ ಸುಮಾರು 23ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಈ ಸಭೆಯಲ್ಲಿ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರು ಮತ್ತು ರಾಜ್ಯ ಮಟ್ಟದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಪಕ್ಷದ ಕಚೇರಿಯಲ್ಲಿ ಬೆಳಿಗ್ಗೆ 11ಕ್ಕೆ ಈ ಸಭೆ ನಡೆಯಲಿದೆ.

ಅಲ್ಲದೇ, ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಗ್ಗೆ ಮತ್ತು ಪಕ್ಷದ ಸಂಘಟನೆ ಬಲಪಡಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT