ಬೆಂಗಳೂರು: ‘ಕಾಂಗ್ರೆಸ್ ಪಕ್ಷದ ಸಾಮೂಹಿಕ ನಾಯಕತ್ವವನ್ನು ಸೋಲಿಸಲು ಸಾಧ್ಯವಿಲ್ಲವೆಂದು ತಿಳಿದು ಬಿಜೆಪಿಯವರು ಪ್ರಧಾನಿ ಹೆಸರನ್ನು ಮುಂಚೂಣಿಗೆ ತಂದು, ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುವುದಾಗಿ ಅಮಿತ್ ಶಾ ಹೇಳಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾನುವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅವರು, ‘ಕಾಂಗ್ರೆಸ್ ಪಕ್ಷ ಮಲ್ಲಿಕಾರ್ಜುನ ಖರ್ಗೆ, ನಾನು, ಸಿದ್ದರಾಮಯ್ಯ, ಪರಮೇಶ್ವರ, ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಬಿ.ಕೆ.ಹರಿಪ್ರಸಾದ್ ಸೇರಿ ಎಲ್ಲರ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ’ ಎಂದರು.

‘ಕೇಂದ್ರ ಸಚಿವ ಅಮಿತ್ ಶಾ ಅವರು ಎರಡು ದಿನ ರಾಜ್ಯ ಪ್ರವಾಸದಲ್ಲಿ, ಬಿಜೆಪಿಯಲ್ಲಿ ನಾಯಕತ್ವ ವಹಿಸಿಕೊಳ್ಳಲು ಯಾರೂ ಸಿದ್ಧರಿಲ್ಲ. ಪಕ್ಷದ ಈಗಿನ ಮುಖಂಡರ ನಾಯಕತ್ವದಲ್ಲಿ ಮುಂದಿನ ಚುನಾವಣೆ ಗೆಲ್ಲಲಾಗದು ಎಂದು ಒಪ್ಪಿಕೊಂಡು, ಪ್ರಧಾನಿ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದಾಗಿ ಸತ್ಯ ನುಡಿದಿದ್ದಾರೆ. ಅಂದರೆ, ನಮ್ಮನ್ನು ಸೋಲಿಸಲು ರಾಜ್ಯದಲ್ಲಿರುವ ಬಿಜೆಪಿ ನಾಯಕರ ಕೈಯಲ್ಲಿ ಸಾಧ್ಯವಾಗದೆ ಕೇಂದ್ರ ತಂಡ ಬರುತ್ತಿದೆ. ಬರಲಿ ತೊಂದರೆ ಇಲ್ಲ. ಜನರು ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.