ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರು, 'ಬಡವರು ಎಂದು ಹೇಳ್ತಾರೆ, ಸರ್ಕಾರಿ ಆಸ್ಪತ್ರೆ ಬಿಟ್ಟು ಯಾಕೆ ಖಾಸಗಿ ಆಸ್ಪತ್ರೆಗೆ ಹೋಗ್ತಾರೆ?' ಎಂದು ಕೆಲವರನ್ನು ಕುಟುಕಿದ್ದರು.

ಇದೀಗ ಇದೇ ಹೇಳಿಕೆ ಇಟ್ಟುಕೊಂಡು ರಾಜ್ಯ ಬಿಜೆಪಿ ಸಿದ್ದರಾಮಯ್ಯ ಹಾಗೂ ಅವರ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದೆ.

ಸಿಎಂ ಅವರೇ, ನಿಮ್ಮ ದುರಾಡಳಿತದಲ್ಲಿ ಸರ್ಕಾರಿ ಆಸ್ಪತ್ರೆಗೆ ಹೋದರೆ ಬದುಕಿ ಬರುತ್ತೇವೆ ಎನ್ನುವ ಗ್ಯಾರಂಟಿ ಜನರಿಗಿಲ್ಲ ಎಂದು ಲೇವಡಿ ಮಾಡಿದೆ.

ವೈದ್ಯರು ಹಾಗೂ ಔಷಧಿಗಳ ಕೊರತೆ, ಸಿಬ್ಬಂದಿಗಳ ನಿರ್ಲಕ್ಷ್ಯ, ಮೂಲಭೂತ ಸೌಕರ್ಯಗಳ ನ್ಯೂನ್ಯತೆಯೇ ಬಡವರನ್ನು ಖಾಸಗಿ ಆಸ್ಪತ್ರೆಗಳತ್ತ ತಳ್ಳುತ್ತಿದೆ. ಸರ್ಕಾರಿ ಆಸ್ಪತ್ರೆಗಳ ಯೋಗ್ಯತೆ ಉತ್ತಮವಾಗಿದ್ದರೆ ಬಡವರು ತಮ್ಮ ಆಸ್ತಿ-ಪಾಸ್ತಿ ಮಾರಿ ಖಾಸಗಿ ಆಸ್ಪತ್ರೆಗೆ ಯಾಕೆ ಹೋಗುತ್ತಿದ್ದರು? ಎಂದು ಪ್ರಶ್ನಿಸಿದೆ.

ನಿಮ್ಮ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಬಡವರನ್ನೇ ಹೊಣೆ ಮಾಡುವುದು ಸರಿಯಲ್ಲ. ಮೊದಲು ರಾಜ್ಯದ ಸರ್ಕಾರಿ ಆಸ್ಪತ್ರೆಗಳನ್ನು ಉದ್ಧಾರ ಮಾಡಿ, ಆಮೇಲೆ ಜನರಿಗೆ ಬುದ್ಧಿ ಹೇಳಿ ಎಂದು ತಿರುಗೇಟು ಕೊಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.