ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಡಗೇವಾರ್ ಹೆಸರು ಹೇಳುವ ಯೋಗ್ಯತೆ ಹರಿಪ್ರಸಾದ್‌ಗೆ ಇಲ್ಲ: ಬಿಜೆಪಿ ಕಿಡಿ

Published 9 ಜೂನ್ 2023, 6:59 IST
Last Updated 9 ಜೂನ್ 2023, 6:59 IST
ಅಕ್ಷರ ಗಾತ್ರ

ಬೆಂಗಳೂರು: ‘ಆರ್‌ಎಸ್‌ಎಸ್‌ ಸಂಸ್ಥಾಪಕರಲ್ಲೊಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್‌ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ’ ಎಂಬ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ರಾಜ್ಯ ಬಿಜೆಪಿ ಕಿಡಿಕಾರಿದೆ.

ರಾಜ್ಯದಲ್ಲಿ‌ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಪಜ್ಞಾನಿಗಳು‌, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ. ಅಂದ ಹಾಗೆ, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಇದುವರೆಗೂ ಮಾಡಿದ ಒಂದೇ ಒಂದು ಒಳ್ಳೆ ಕೆಲಸ ಅಂದರೆ, ಮಾನಸಿಕ ಅಸ್ವಸ್ಥರಾಗಿರುವ ಬಿ.ಕೆ. ಹರಿಪ್ರಸಾದ್ ಅವರಂತಹವರನ್ನು ಸಚಿವ ಸಂಪುಟದಿಂದ ದೂರವಿಟ್ಟಿದ್ದು.. ! ಎಂದು ಟ್ವೀಟ್ ಮಾಡಿದೆ.

Venugopala K.
Venugopala K.

ಗೌರವಾನ್ವಿತ ಹೆಡಗೇವಾರರಂತ ಅಪ್ರತಿಮ ದೇಶಭಕ್ತರ ಹೆಸರು ಹೇಳುವ ಯೋಗ್ಯತೆಯನ್ನು ಹರಿಪ್ರಸಾದರವರು ಮೊದಲು ಸಂಪಾದಿಸಲಿ, ಉಳಿದದ್ದೆಲ್ಲ ಮತ್ತೆ! ಎಂದು ಟೀಕಿಸಿದೆ.

ಗುರುವಾರ ಶಿವಮೊಗ್ಗದಲ್ಲಿ ಮಾತನಾಡಿದ್ದ ಹರಿಪ್ರಸಾದ್ ಅವರು, ‘ಶಿಕ್ಷಣ ಸೇರಿದಂತೆ ಸರ್ಕಾರದ ಯಾವ ಇಲಾಖೆಯಲ್ಲೂ ಸಂಘ ಪರಿವಾರದ ಸಿದ್ಧಾಂತಗಳು ನುಸುಳಲು ಅವಕಾಶ ನೀಡುವುದಿಲ್ಲ. ಹೆಡಗೇವಾರ್‌ ತರಹದ ರಣಹೇಡಿಗಳ ವಿಚಾರ ಇನ್ನು ಮುಂದೆ ಪಠ್ಯದಲ್ಲಿ ಇರುವುದಿಲ್ಲ’ ಎಂದಿದ್ದರು.

‘ಹೆಡಗೇವಾರ್‌ ಒಬ್ಬ ಸ್ವಾತಂತ್ರ್ಯ ಹೋರಾಟಗಾರ ಎಂಬುದನ್ನು ಬಿಜೆಪಿಯವರು ಸಾಬೀತು ಮಾಡಲಿ. ಬ್ರಿಟಿಷರ ಕ್ಷಮಾಪಣೆ ಕೇಳಿದ ನಕಲಿ ಸ್ವಾತಂತ್ರ್ಯ ಹೋರಾಟಗಾರರಿಗೆಲ್ಲಾ ಮನ್ನಣೆ ನೀಡಲು ಸಾಧ್ಯವಿಲ್ಲ. ಅವರೆಲ್ಲ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ನೀಡಿದ್ದು ಏಕೆ ಎಂಬುದನ್ನು ಬಹಿರಂಗಪಡಿಸಲಿ’ ಎಂದು ಸವಾಲು ಹಾಕಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT