ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಅತೃಪ್ತರ ಬಣ ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲೇ ನಡೆಸಿದ ಸಭೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಭಾಗಿಯಾಗುವ ಮೂಲಕ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿರುವ ಸೋಮಣ್ಣ ಅವರು, ‘ಸಿದ್ದೇಶ್ವರ ಅವರು ಪಕ್ಷದ ಹಿರಿಯ ನಾಯಕರು. ಅವರ ಮನೆಯಲ್ಲಿ ಜೂನ್ 5ರಂದು ಮದುವೆ ಇತ್ತು. ಆಗ ನಾನು ಜಮ್ಮುವಿನಲ್ಲಿದ್ದ ಕಾರಣ ಮದುವೆಗೆ ಬರಲಿಲ್ಲ. ನಿನ್ನೆ ರಾತ್ರಿ ಹೋಗಿದ್ದೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಈ ಭೇಟಿಯ ಬಗ್ಗೆ ಅಪಾರ್ಥ ಕಲ್ಪಿಸಬೇಕಾಗಿಲ್ಲ’ ಎಂದು ಹೇಳಿದರು.

ಮಾಜಿ ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ ಅವರ ನಿವಾಸದಲ್ಲಿ ಗುರುವಾರ ರಾತ್ರಿ ಶಾಸಕ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಅತೃಪ್ತರ ಸಭೆ ನಡೆಯಿತು. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಬೇಕು ಮತ್ತು ಯಡಿಯೂರಪ್ಪ ಕುಟುಂಬದವರನ್ನು ಬಿಟ್ಟು ಬೇರೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಸಂದೇಶವನ್ನು ರವಾನಿಸುವ ಪ್ರಯತ್ನ ನಡೆಯಿತು ಎಂದು ಮೂಲಗಳು ತಿಳಿಸಿವೆ.

ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿರುವ ವಿ.ಸೋಮಣ್ಣ ಅವರು ಅತೃಪ್ತ ಬಣದ ವಿಶ್ವಾಸ ಗಳಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆಯ ಬಳಿಕ ಅತೃಪ್ತ ಬಣದ ಚಟುವಟಿಕೆ ಕಡಿಮೆಯಾಗಿತ್ತು. ಇದೀಗ ಅಮಿತ್ ಶಾ ಅವರ ಭೇಟಿ ನೀಡಿದ ಸಂದರ್ಭದಲ್ಲೇ ಸಭೆ ನಡೆಸುವ ಮೂಲಕ ವರಿಷ್ಠರಿಗೂ ತಮ್ಮ ಅಸಮಾಧಾನ ತಲುಪಿಸುವ ಯತ್ನ ನಡೆಸಿದ್ದಾರೆ. ಅಲ್ಲದೇ, ಇದೇ 23 ಮತ್ತು 24ರಂದು ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ, ಅಹವಾಲು ಸಲ್ಲಿಸಲು ನಿರ್ಧರಿಸಿದ್ದಾರೆ ಎಂದು ಗೊತ್ತಾಗಿದೆ.

ಅಲ್ಲದೇ, ತಟಸ್ಥ ಬಣ ಮತ್ತು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ತಮ್ಮ ಪ್ರಯತ್ನಕ್ಕೆ ಬೆಂಬಲ ನೀಡುವಂತೆ ಮನವೊಲಿಸುವ ಕೆಲಸವನ್ನೂ ಅತೃಪ್ತರ ಬಣ ಮಾಡಿದೆ. ಇವರು ಆರ್.ಅಶೋಕ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಶೋಭಾ ಕರಂದ್ಲಾಜೆ ಭೇಟಿ ಮಾಡಿ ಮಾತುಕತೆ ನಡೆಸಿದೆ. ಈ ಮಧ್ಯೆ ವಿ.ಸೋಮಣ್ಣ ಅವರು ಅತೃಪ್ತರ ಸಭೆಯಲ್ಲಿ ಭಾಗಿಯಾಗಿದ್ದು, ಬಿಜೆಪಿಯಲ್ಲಿ ತಲ್ಲಣ ಮೂಡಿಸಿದೆ ಎಂಬ ಅಭಿಪ್ರಾಯ ಪಕ್ಷದ ವಲಯದಲ್ಲಿ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.