ಬೆಂಗಳೂರು: ‘ತಮ್ಮಲ್ಲಿರುವ ಆಂತರಿಕವಾಗಿ ಸಮಸ್ಯೆಯನ್ನು ಸರಿ ಮಾಡಿಕೊಳ್ಳಲು ಬಿಜೆಪಿಯವರು ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಡಾ ಅಕ್ರಮ ಎಂದು ಮೈಸೂರು ಚಲೊ ಮಾಡಿದರು. ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ. ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ. ಬೇಡ ಎಂದು ಹೇಳಿದವರು ಯಾರು’ ಎಂದು ಕುಟುಕಿದರು.

ತುಂಗಭದ್ರಾ ತುಂಬಿದ ತಕ್ಷಣ ಬಾಗಿನ ಅರ್ಪಣೆ: ‘ತುಂಗಭದ್ರಾ ಅಣೆಕಟ್ಟಿನ ಗೇಟ್ ಅನ್ನು ಕಾರ್ಮಿಕರ, ಎಂಜಿನಿಯರ್‌ಗಳ, ಅಧಿಕಾರಿಗಳ ಶ್ರಮದಿಂದ ದುರಸ್ತಿ ಮಾಡಲಾಗಿದೆ. ಅಣೆಕಟ್ಟು ತುಂಬಿದ ತಕ್ಷಣ ನಾನು ಮತ್ತು ಮುಖ್ಯಮಂತ್ರಿ ಬಾಗಿನ ಅರ್ಪಿಸುತ್ತೇವೆ’ ಎಂದರು.

‘ಗೇಟ್ ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡ ಪ್ರತಿಯೊಬ್ಬ ಕಾರ್ಮಿಕರನ್ನು ಸರ್ಕಾರದಿಂದ ಗೌರವಿಸಲಾಗುವುದು. ಇಡೀ ದೇಶವೇ ಏನಾಗಬಹುದು ಎಂದು ಕಾತರದಿಂದ ನೋಡುತ್ತಿತ್ತು. ನಾವು ಅದರಲ್ಲಿ ಯಶಸ್ಸು ಕಂಡಿದ್ದೇವೆ. ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಟೀಕೆ ಮಾಡುತ್ತಿದ್ದವು. ಆಗ ನಾವೇನು ಮಾತನಾಡಲಿಲ್ಲ. ನಾವು ಕೆಲಸ ಮಾಡಿ ಸಾಧಿಸಿದ್ದೇವೆ’ ಎಂದು ಹೇಳಿದರು.

‘ರಾಜ್ಯದ ಎಲ್ಲ ಅಣೆಕಟ್ಟುಗಳ ಸುರಕ್ಷತೆಗೆ ಎಂದು ತಾಂತ್ರಿಕ ಸಮಿತಿ ರಚನೆ ಮಾಡಿದ್ದೇವೆ. ಅವರು ಎಲ್ಲ ಅಣೆಕಟ್ಟುಗಳ ಸುರಕ್ಷಾತ ವರದಿ ನೀಡಲಿದ್ದಾರೆ’ ಎಂದು ತಿಳಿಸಿದರು.

‘ಆಲಮಟ್ಟಿ ತುಂಬಿ ತುಳುಕುತ್ತಿದೆ. ಮಂಡ್ಯ ಸೇರಿದಂತೆ ಇತರೆ ಗ್ರಾಮಾಂತರ ಭಾಗಗಳಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಉತ್ತಮ ಮಳೆಯಾಗಿ ತುಂಬುವ ನಿರೀಕ್ಷೆ ಇದೆ’ ಎಂದೂ ಶಿವಕುಮಾರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.