ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಎಲ್ಲ ನಾಯಕರು ರಾಜ್ಯ ಪ್ರವಾಸ ಹಮ್ಮಿಕೊಳ್ಳಲು ಪ್ರಮುಖ ನಾಯಕರ ಸಮಿತಿ ಸಭೆ ನಿರ್ಧರಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಕ್ಷದ ರಾಜ್ಯ ಉಸ್ತುವಾರಿ ರಾಧಾಮೋಹನ್ದಾಸ್ ಅಗರ್ವಾಲ್ ನೇತೃತ್ವದಲ್ಲಿ ಎರಡು ದಿನಗಳಿಂದ ಹಲವು ಸಭೆಗಳು ನಡೆದಿವೆ. ರಾಜ್ಯ ಎಸ್ಟಿ ಮೋರ್ಚಾ, ಮಹಿಳಾ ಮೋರ್ಚಾ, ಯುವ ಮೋರ್ಚಾಗಳ ಪ್ರಮುಖರ ಸಭೆ ನಡೆದಿದೆ. ಬೇರೆ ಬೇರೆ ಸಮುದಾಯಗಳ ಪ್ರಮುಖರ ಸಭೆ ನಡೆಸಲಾಗುತ್ತಿದೆ. ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ವೇಳೆಗೆ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಚರ್ಚೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯ ಸರಕಾರದ ಕುಮ್ಮಕ್ಕಿನಿಂದ ಬಿಜೆಪಿ ನಾಯಕರು, ಜನಪ್ರತಿನಿಧಿಗಳು, ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಬಗ್ಗಬಾರದು. ಗೂಂಡಾ ಸರ್ಕಾರದ ವಿರುದ್ಧ ಯಶಸ್ವಿಯಾಗಿ ಹೋರಾಟ ಮುಂದುವರಿಸಲು ಸಭೆ ಸಮ್ಮತಿ ನೀಡಿದೆ ಎಂದರು.

ಪ್ರತಿ ವಿಭಾಗಕ್ಕೆ ಒಂದು ತಂಡ ರಚಿಸಿ, ಜಿಲ್ಲಾ ಪ್ರವಾಸ ಹಮ್ಮಿಕೊಳ್ಳುವ ಕುರಿತು ಯೋಚನೆ ರೂಪಿಸಲಾಗುವುದು. ಜನವಿರೋಧಿ- ಭ್ರಷ್ಟ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರಾಧಾಮೋಹನ್ದಾಸ್ ಅಗರ್ವಾಲ್, ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಸಂಸದ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.