ಕಲಬುರಗಿ: ದಶಕಗಳ ಕಾಲ ಧರ್ಮಸಿಂಗ್ ಕುಟುಂಬ ಪ್ರಾಬಲ್ಯದ ಹಾಗೂ ಕಾಂಗ್ರೆಸ್ ಭದ್ರ ಕೋಟೆಯಾದ ಜೇವರ್ಗಿಯಲ್ಲಿ ಸೋಮವಾರ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಅದ್ದೂರಿಯಾಗಿ ಸಾಗಿತು.

ಯಾತ್ರೆಗಾಗಿ ಸಿದ್ಧಪಡಿಸಲಾದ ವಾಹನ ಏರಿದ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಶಾಸಕ ಬಿ.ಎಸ್.ಯಡಿಯೂರಪ್ಪ ಅವರು ರಿಲಯನ್ಸ್ ಪೆಟ್ರೋಲ್ ಪಂಪ್ ಬಳಿ ಮೆರವಣಿಗೆಗೆ ಚಾಲನೆ ನೀಡಿದರು.

ಬಸವೇಶ್ವರ ವೃತ್ತದವರೆಗೆ ನಡೆದ ಮೆರವಣಿಗೆಯ ಮಾರ್ಗದ ಉದ್ದಕ್ಕೂ ನಾನಾ ವಾದ್ಯ ಮೇಳಗಳು ಕಳೆತಂದವು.

ಬಿಜೆಪಿ ಬಾವುಟ ಹಿಡಿದು, ಬಿಜೆಪಿ ಹೆಸರಿನ ಕೇಸರಿ ಟೊಪ್ಪಿಗೆ ಹಾಕಿಕೊಂಡು ಕುಣಿದು ಕುಪ್ಪಳಿಸಿದರು. ಅಪಾರ ಸಂಖ್ಯೆಯಲ್ಲಿ ಸೇರಿದ ಬಿಜೆಪಿಯ ಕಾರ್ಯಕರ್ತರು ಜೈಕಾರ ಮೊಳಗಿಸಿದರು. ರಸ್ತೆ ಉದ್ದಕ್ಕೂ ಬಿಜೆಪಿ ಧ್ವಜ, ಬ್ಯಾನರ್ ರಾರಾಜಿಸಿದವು. ರೋಡ್ ಶೋ ಸಾಗುವ ಮಾರ್ಗದ ರಸ್ತೆ ಕೇಸರಿಮಯವಾಗಿ ಮಾರ್ಪಟ್ಟಿತ್ತು.

ಕೇಂದ್ರ ಸಚಿವ ಭಗವಂತ ಖೂಬಾ, ಸಾರಿಗೆ ಸಚಿವ ಬಿ.ಶ್ರೀರಾಮುಲು, ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಜಗದೀಶ್ ಶೆಟ್ಟರ್, ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮಡು, ಸಂಸದ ಡಾ.ಉಮೇಶ ಜಾಧವ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಸುನೀಲ ವಲ್ಯಾಪುರೆ, ಶಶೀಲ್ ನಮೋಶಿ, ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ, ರಾಜ್ಯ ಘಟಕದ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮುಖಂಡ ರೇವಣಸಿದ್ದಪ್ಪ ಸಂಕಾಲಿ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಶೋಭಾ ಬಾಣಿ, ಜೇವರ್ಗಿ ಮಂಡಲ ಅಧ್ಯಕ್ಷ ಭೀಮರಾವ ಗುಜಗುಂಡ ನೆಲೋಗಿ, ಸ್ಥಳೀಯ ಮುಖಂಡರಾದ ರಮೇಶ ಬಾಬು ವಕೀಲ, ಹಳ್ಳಿಯಪ್ಪ ಆಚಾರ್ಯ ಜೋಶಿ, ಮಲ್ಲಿನಾಥಗೌಡ ಯಲಗೋಡ, ಎಂಬಿ ಪಾಟೀಲ ಹರವಾಳ, ಸಾಯಬಣ್ಣ ದೊಡ್ಡಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.