ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನಾಯಕರ ತಿಕ್ಕಾಟದಿಂದ ಸೋಲಾಗಲಿದೆ: ಸಚಿವ ರಾಮಲಿಂಗಾ ರೆಡ್ಡಿ

Published 11 ಮಾರ್ಚ್ 2024, 7:50 IST
Last Updated 11 ಮಾರ್ಚ್ 2024, 7:50 IST
ಅಕ್ಷರ ಗಾತ್ರ

ಮುಂಡಗೋಡ: 'ರಾಜ್ಯ ಬಿಜೆಪಿ ನಾಯಕರಲ್ಲಿ ತಿಕ್ಕಾಟ ನಡೆಯುತ್ತಿದೆ. ಹೀಗಾಗಿ ಅವರು ಹೆಚ್ಚು ಕ್ಷೇತ್ರಗಳನ್ನು ಈ ಬಾರಿ ಗೆಲ್ಲುವುದಿಲ್ಲ' ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಇಲ್ಲಿನ ಹುಬ್ಬಳ್ಳಿ ರಸ್ತೆಯಲ್ಲಿ ₹ 4 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಬಸ್‌ ಡಿಪೋ ಉದ್ಘಾಟಿಸಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

'ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನೋಡಿ ವಿಪಕ್ಷಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ' ಎಂದರು.

'ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಅವರು ಸಂವಿಧಾನ ಬದಲಾವಣೆ ಬಗ್ಗೆ ಹಿಂದೆಯೂ ಹೇಳಿದ್ದರು. ಒಮ್ಮೆ ಮಂತ್ರಿ ಆಗಿದ್ದಾಗ ತುಸು ಆ್ಯಕ್ಟಿವ್‌ ಆಗಿದ್ದರು. ನಂತರ ಮಂತ್ರಿ ಮಾಡದ್ದರಿಂದ ಐದು ವರ್ಷದಿಂದ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಈಗ ಚುನಾವಣೆ ಬಂದಿದ್ದರಿಂದ ಮತ್ತೆ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಇದೇನೋ ಹೊಸತಲ್ಲ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

'ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯವರು ನಾವೇ ಗೆಲ್ಲುತ್ತಿವಿ ಎನ್ನುತ್ತಿದ್ದರು. ಈಗಲೂ ಅದನ್ನೇ ಹೇಳುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುವುದು ನಿಶ್ಚಿತ' ಎಂದರು.

'ಲೋಕಸಭಾ ಕ್ಷೇತ್ರದ ಟಿಕೆಟ್‌ ಘೋಷಣೆ ಬಗ್ಗೆ ಇಂದು ಸಭೆ ನಡೆಯಲಿದೆ. ಪುತ್ರಿ ಸೌಮ್ಯ ರೆಡ್ಡಿ ಅವರು ಲೋಕಸಭಾ ಟಿಕೆಟ್‌ ಕೇಳಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ, ಬಡವರ ಪರವಾದ ಪಕ್ಷ ಕಾಂಗ್ರೆಸ್‌ ಆಗಿರುವುದರಿಂದ ಸಹಜವಾಗಿ ಎಲ್ಲರಿಗೂ ಕಾಂಗ್ರೆಸ್‌ ಬಗ್ಗೆ ವಿಶೇಷ ಒಲವು ಇದ್ದೇ ಇರುತ್ತದೆ' ಎಂದರು.

'ಶಾಸಕರಾದ ಎಸ್‌.ಟಿ.ಸೋಮಶೇಖರ ಹಾಗೂ ಶಿವರಾಮ ಹೆಬ್ಬಾರ್‌ ಹಿಂದೆ ಕಾಂಗ್ರೆಸ್‌ ಪಕ್ಷದಲ್ಲಿ ಇದ್ದವರೇ ಆಗಿದ್ದಾರೆ. ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರುತ್ತಾರೆ ಇಲ್ಲವೋ ಎಂಬುದನ್ನು ಅವರ ಹತ್ತಿರವೇ ಕೇಳಬೇಕು. ನಾನು ಹೇಳಕ್ಕಾಗಲ್ಲ. ಪಕ್ಷಕ್ಕೆ ಬಂದರೆ ಬೇಡ ಎನ್ನಲು ಆಗದು. ಕಾರ್ಯಾಧ್ಯಕ್ಷರಾಗಿ ಅವರನ್ನು ಸ್ವಾಗತಿಸುತ್ತೇವೆ' ಎಂದರು.

'ಶಕ್ತಿ ಯೋಜನೆಯಿಂದ ಬಸ್‌ಗಳ ಬೇಡಿಕೆ ಹೆಚ್ಚಾಗಿದ್ದು, 5,800 ಬಸ್‌ಗಳನ್ನು ಹೊಸದಾಗಿ ಖರೀದಿಸಲಾಗುತ್ತಿದ್ದು, ಈಗಾಗಲೇ ಅರ್ಧದಷ್ಟು ಬಸ್‌ಗಳು ಬಂದಿವೆ. ಮೇ ಅಂತ್ಯದೊಳಗೆ ಇನ್ನುಳಿದ ಬಸ್‌ಗಳು ಬರಲಿವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 1619 ಸಿಬ್ಬಂದಿ ನೇಮಕ ಮಾಡಲಾಗಿದೆ. ನಿವೃತ್ತ ನೌಕರರ ಬೇಡಿಕೆಯನ್ನೂ ಈಡೇರಿಸಲಾಗಿದೆ. ಶಕ್ತಿ ಯೋಜನೆಯ ಹಣ ಸರ್ಕಾರದಿಂದ ಬರಬೇಕಾಗಿದ್ದು ಅದರ ನಂತರ ಇನ್ನುಳಿದ ನೌಕರರ ಬೇಡಿಕೆ ಈಡೇರಿಸಲಾಗುವುದು' ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT