ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮದ ಹಗರಣ: ಜೂನ್‌ 28ರಂದು ಬಿಜೆಪಿ ಪ್ರತಿಭಟನೆ

Published 15 ಜೂನ್ 2024, 16:30 IST
Last Updated 15 ಜೂನ್ 2024, 16:30 IST
ಅಕ್ಷರ ಗಾತ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಜೂನ್‌ 28ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು, ಜಿಲ್ಲಾಧಿಕಾರಿ ಕಚೇರಿಗಳಿಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ನಗರದಲ್ಲಿ ಶನಿವಾರ ನಡೆದ ಎಸ್‍ಟಿ ಮೋರ್ಚಾ ಪ್ರಮುಖರ ಸಭೆಯ ನಂತರ ಅವರು ಮಾತನಾಡಿದರು.

ಹಗರಣದ ವಿಚಾರದಲ್ಲಿ ಸರ್ಕಾರ ಪಾರದರ್ಶಕವಾಗಿ ನಡೆದುಕೊಳ್ಳುತ್ತಿಲ್ಲ. ತೇಪೆ ಹಚ್ಚಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸುತ್ತಿದೆ. ಪರಿಶಿಷ್ಟ ಪಂಗಡಕ್ಕೆ ಕಾಂಗ್ರೆಸ್‌ನಿಂದ ಆಗಿರುವ ಅನ್ಯಾಯವನ್ನು ಹೋರಾಟದ ಮೂಲಕ ಸರಿಪಡಿಸಬೇಕು. ಸಂಪೂರ್ಣ ವಾಪಸ್‌ ತರಬೇಕು ಎಂದು ಒತ್ತಾಯಿಸಲಾಗುವುದು. ಜೂನ್‌ 18ರಂದು ಎಲ್ಲ ಜಿಲ್ಲೆಗಳಲ್ಲೂ ಸಭೆ ನಡೆಸಲಾಗುವುದು ಎಂದರು.

ಮಾಜಿ ಸಚಿವ ಬಿ.ಶ್ರೀರಾಮುಲು, ಶಾಸಕ ಜನಾರ್ದನ ರೆಡ್ಡಿ, ಎಸ್‍ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಮಾಜಿ ಶಾಸಕ ಪ್ರೀತಮ್ ಗೌಡ, ವಿಧಾನ ಪರಿಷತ್‌ ಸದಸ್ಯ ಎನ್.ರವಿಕುಮಾರ್, ಹೇಮಲತಾ ನಾಯಕ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT