ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮ ಅವ್ಯವಹಾರ: ಸಿಎಂ ಮನೆಗೆ ಮುತ್ತಿಗೆ ಹಾಕಲು BJP ಕಾರ್ಯಕರ್ತರು ಯತ್ನ

Published 30 ಮೇ 2024, 8:32 IST
Last Updated 30 ಮೇ 2024, 8:32 IST
ಅಕ್ಷರ ಗಾತ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ₹ 187 ಕೋಟಿ ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್.ಟಿ ಮೋರ್ಚಾ ಕಾರ್ಯಕರ್ತರು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಏಕಾಏಕಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ಬಳಿ, ಧಿಕ್ಕಾರ ಧಿಕ್ಕಾರ, ಸಚಿವರಿಗೆ ಧಿಕ್ಕಾರ’, ‘ಸರಕಾರಕ್ಕೆ ಧಿಕ್ಕಾರ’ ಮುಂತಾದ ಘೋಷಣೆಗಳನ್ನು ಹಾಕಿ ನುಗ್ಗಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

₹187 ಕೋಟಿ ಲೂಟಿ ಹಗರಣದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರ ಮರಣ ಪತ್ರದಲ್ಲಿ ಸಚಿವರ ಹೆಸರು ಉಲ್ಲೇಖಿಸಿದ್ದು, ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಶಾಂತಿಯುತ ಪ್ರತಿಭಟನೆ ಮುಂದಾದ ಪಕ್ಷದ ಕಾರ್ಯಕರ್ತರನ್ನು ಬಂಧಿಸಿ, ಪೊಲೀಸರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಕೂಡಲೇ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು ಎಂದು ವಿರೋಧಪಕ್ಷದ ನಾಯಕ ಆರ್‌.ಅಶೋಕ ಅವರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT