ತುಮಕೂರು: ಕಲಬುರಗಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ತನಿಖಾ ವರದಿ ಬಂದ ನಂತರ ಸತ್ಯಾಂಶ ಹೊರ ಬರಲಿದೆ. ಇದರಲ್ಲಿ ಯಾರು ಭಾಗಿಯಾಗಿದ್ದಾರೆ, ಯಾರೆಲ್ಲ ಕೈವಾಡ ಇದೆ ಎಂಬುದು ಗೊತ್ತಾಗಲಿದೆ’ ಎಂದು ತಿಳಿಸಿದರು.
ಸಚಿವ ಡಾ.ಶರಣಪ್ರಕಾಶ ಪಾಟೀಲ್ ಪಾತ್ರ ಇದೆ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಅದನ್ನು ಪರಿಶೀಲಿಸಿ, ಖಚಿತ ಪಡಿಸಿಕೊಳ್ಳಬೇಕಿದೆ. ಆರೋಪ ಮಾಡುತ್ತಿರುವವರ ಹೇಳಿಕೆಯನ್ನು ಪಡೆದುಕೊಂಡು ಪರಿಶೀಲಿಸಬೇಕಿದೆ. ಅದಕ್ಕಾಗಿ ಸಿಐಡಿ ತನಿಖೆ ನಡೆಸಲಾಗುತ್ತಿದೆ.
ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಲಾಗುತ್ತದೆ. ವರದಿ ಬಂದ ನಂತರ ಸತ್ಯಾಂಶ ಗೊತ್ತಾಗಲಿದೆ. ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ವಿಚಾರದಲ್ಲಿ ಎಲ್ಲಾ ಆರೋಪಗಳಿಗೆ ಉತ್ತರ ಕೊಡಲು ಸಾಧ್ಯವಿಲ್ಲ ಎಂದು ಹೇಳಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.