ಬಿಜೆಪಿ ಪ್ರಮುಖರ ಸಭೆಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಫಲಿತಾಂಶ ಪ್ರಕಟವಾದ ಕೂಡಲೇ ರಾಜ್ಯ ಸರ್ಕಾರ ಬೀಳುತ್ತದೆ. ಈಗಾಗಲೇ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿಲ್ಲ. ಅವರೆಲ್ಲ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ’ ಎಂದರು.