ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೈ’ ಹಿಡಿದ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ

Published 12 ಅಕ್ಟೋಬರ್ 2023, 8:22 IST
Last Updated 12 ಅಕ್ಟೋಬರ್ 2023, 8:22 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಮುಖಂಡ, ಮಾಜಿ ಶಾಸಕ ರಾಮಪ್ಪ ಲಮಾಣಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್‌ ಸೇರಿದರು.

ಬಳಿಕ ಮಾತನಾಡಿದ ರಾಮಪ್ಪ ಲಮಾಣಿ, ‘ಯಾವುದೇ ಷರತ್ತು ಇಲ್ಲದೇ ನಾನು ಕಾಂಗ್ರೆಸ್  ಸೇರುತ್ತಿದ್ದೇನೆ. ಬಿಜೆಪಿಯಲ್ಲಿ ಆಗಿರುವ ನೋವಿನಿಂದ ಆ ಪಕ್ಷ ತೊರೆದಿದ್ದೇನೆ. ಕಾಂಗ್ರೆಸ್ ಪಕ್ಷದ ನಾಯಕರು ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಾರೋ ಅವರನ್ನು ಗೆಲ್ಲಿಸಲು ನಾನು ಶ್ರಮಿಸುತ್ತೇನೆ’ ಎಂದರು.

‘ಜಗದೀಶ ಶೆಟ್ಟರ್ ಹಾಗೂ ಡಿ.ಕೆ. ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಅನೇಕ ನಾಯಕರಿಗೆ ಗಾಳ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಅನೇಕರು ಕಾಂಗ್ರೆಸ್ ಸೇರಲಿದ್ದಾರೆ. ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಮಾಡಲಿದೆ’ ಎಂದರು.

‘ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಅನೇಕ ಶಾಸಕರು ಕೇವಲ 1,500ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದಿದ್ದಾರೆ. ಇಲ್ಲದಿದ್ದರೆ, ಬಿಜೆಪಿ 40 ಸ್ಥಾನಗಳಿಗೆ ನಿಲ್ಲುತ್ತಿತ್ತು. ಮುಂದಿನ ದಿನಗಳಲ್ಲಿ ಬಿಜೆಪಿ ಇನ್ನಷ್ಟು ದೂಳೀಪಟ ಆಗಲಿದೆ’ ಎಂದರು.

‘ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಜನರಿಗೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಾರೆ. ಜನರು ಕೂಡ ಕಾಂಗ್ರೆಸ್ ಸರ್ಕಾರದ ಮೇಲೆ ಹೆಚ್ಚಿನ ವಿಶ್ವಾಸ ಇಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಕಾರ್ಯಕರ್ತರೂ ಕೂಡ ಪಕ್ಷ ತೊರೆದು ಕಾಂಗ್ರೆಸ್ ಸೇರುವುದಾಗಿ ಮಾತು ನೀಡಿದ್ದಾರೆ. ಅದಕ್ಕಾಗಿ ಪ್ರತ್ಯೇಕ ಕಾರ್ಯಕ್ರಮ ಮಾಡುತ್ತೇವೆ’ ಎಂದರು.

 ಸಚಿವ ಎಚ್‌.ಕೆ. ಪಾಟೀಲ, ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಜಗದೀಶ ಶೆಟ್ಟರ್, ಶಾಸಕರಾದ ಲಕ್ಷ್ಮಣ್ ಸವದಿ, ವಿನಯ್ ಕುಲಕರ್ಣಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಬಿ.ಎನ್. ಚಂದ್ರಪ್ಪ ಮತ್ತಿತರರು ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT