ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಚುನಾವಣೆ | ಹನುಮಂತಯ್ಯಗೆ ‘ಕೈ’ ತಪ್ಪಿದ ಟಿಕೆಟ್‌: ಬಿಕೆಸಿ ಅಸಮಾಧಾನ

Published 19 ಫೆಬ್ರುವರಿ 2024, 15:53 IST
Last Updated 19 ಫೆಬ್ರುವರಿ 2024, 15:53 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯಿಂದ ಎಲ್‌.ಹನುಮಂತಯ್ಯ ಅವರನ್ನು ಕೈಬಿಟ್ಟಿರುವುದು ಆಘಾತ ತಂದಿದೆ’ ಎಂದು ಕಾಂಗ್ರೆಸ್‌ ಮುಖಂಡ ಬಿ.ಕೆ.ಚಂದ್ರಶೇಖರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ದಲಿತ ಎಡಗೈ ಸಮುದಾಯದ ಹನುಮಂತಯ್ಯ ಅವರು ಗ್ರಾಮೀಣ ಪ್ರದೇಶದ ಅತ್ಯಂತ ಬಡ ಕುಟುಂಬದಲ್ಲಿ ಜನಿಸಿ, ಸಾಕಷ್ಟು ಕಷ್ಟ ಅನುಭವಿಸಿದ್ದರು. ಕಷ್ಟಪಟ್ಟು ಶಿಕ್ಷಣ ಪಡೆದು ಸುಲಲಿತವಾಗಿ ಇಂಗ್ಲಿಷ್‌ ಮಾತನಾಡುತ್ತಾರೆ. ರಾಜ್ಯಸಭೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದರು. ಅವರನ್ನು ಈ ಬಾರಿಯ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಮಾಡದಿರುವುದು ಉತ್ತಮ ಬೆಳವಣಿಗೆ ಅಲ್ಲ’ ಎಂದು ತಿಳಿಸಿದ್ದಾರೆ.

‘ಕೇಂದ್ರ ಸರ್ಕಾರವು ಸಂವಿಧಾನದತ್ತ  ಎಲ್ಲ ಅಧಿಕಾರವನ್ನೂ ಮೊಟಕುಗೊಳಿಸಿ ಒಕ್ಕೂಟ ವ್ಯವಸ್ಥೆಯನ್ನೇ ದುರ್ಬಲಗೊಳಿಸುತ್ತಿದೆ. ರಾಜ್ಯಗಳೇ ವಸೂಲಿ ಮಾಡುವ ತೆರಿಗೆ ಹಣವನ್ನು ಬಿಜೆಪಿಯೇತರ ಪಕ್ಷಗಳು ಅಧಿಕಾರಿದಲ್ಲಿರುವ ರಾಜ್ಯಗಳಿಗೆ ನೀಡುತ್ತಿಲ್ಲ. ಇಂತಹ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯಗಳ ಸಂಬಂಧ ಕುರಿತು ರಾಜ್ಯಸಭೆಯಲ್ಲಿ ಚರ್ಚೆ ನಡೆಸಲು ಸಾಕಷ್ಟು ಪಾಂಡಿತ್ಯವುಳ್ಳ ಹನುಮಂತಯ್ಯ ಅವರನ್ನು ಮತ್ತೆ ಆರಿಸಿ ಕಳುಹಿಸುವ ಅಗತ್ಯವಿತ್ತು’ ಎಂದು ಹೇಳಿದ್ದಾರೆ.

‘ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಎಡಗೈ ದಲಿತರ ಅಸಮಾಧಾನವನ್ನು ನಿರ್ಲಕ್ಷಿಸಬಾರದು’ ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT