ನವದೆಹಲಿ: ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣದ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷರಾಗಿ ವಿಧಾನ ಪರಿಷತ್ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಎಐಸಿಸಿ ಬುಧವಾರ ರಾತ್ರಿ ನೇಮಕ ಮಾಡಿದೆ.

ಹರಿಪ್ರಸಾದ್ ಅವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಸಚಿವರ ಮೊದಲ ಪಟ್ಟಿಯಲ್ಲಿ ಅವರ ಹೆಸರು ಇರಲಿಲ್ಲ. ಈ ನಡುವೆ, ಕೆಪಿಸಿಸಿ ಅಧ್ಯಕ್ಷರಾಗುವಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಹರಿಪ್ರಸಾದ್ ಅವರ ಮನವೊಲಿಸಿದರು. ಆ ಬಳಿಕ, ಅಧ್ಯಕ್ಷ ಗಾದಿ ವಹಿಸಿಕೊಳ್ಳಲು ಒಪ್ಪಿದರು. ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಡಿಗ ಸಮುದಾಯದ ಅವರು ನಾಲ್ಕು ಅವಧಿಗೆ ರಾಜ್ಯಸಭಾ ಸದಸ್ಯರಾಗಿದ್ದರು. ಆರು ವರ್ಷಗಳಿಂದ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಜೂನ್ 30ಕ್ಕೆ ಅವರ ಪರಿಷತ್ ಸದಸ್ಯತ್ವ ಮುಗಿಯಲಿದೆ. ಪರಿಷತ್ ಚುನಾವಣೆಗೆ ಮತ್ತೆ ಅವರನ್ನು ಕಣಕ್ಕಿಳಿಸಲಾಗಿದೆ.

ಹೈಕಮಾಂಡ್ ಜತೆಗೆ ನಿಕಟ ಸಂಪರ್ಕ ಹೊಂದಿರುವ ಅವರು ಈ ಹಿಂದೆ 19 ರಾಜ್ಯಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. ಅವರು ಪ್ರಸ್ತುತ ಹರಿಯಾಣದ ಉಸ್ತುವಾರಿಯಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪ್ರಬಲ ಆಕಾಂಕ್ಷಿಯಾಗಿದ್ದರು. ಅವರು ಅಧ್ಯಕ್ಷ ಗಾದಿಯ ಜತೆಗೆ ಸಚಿವ ಸ್ಥಾನಕ್ಕೂ ಪಟ್ಟು ಹಿಡಿದಿದ್ದರು. ಇದಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸಿರಲಿಲ್ಲ. ಆ ನಂತರ, ಹರಿಪ್ರಸಾದ್ ಹೆಸರು ಮುನ್ನೆಲೆಗೆ ಬಂದಿತ್ತು.

ಪ್ರಬಲ ಒಕ್ಕಲಿಗ ಸಮುದಾಯದ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿದ್ದಾರೆ. ಜಾತಿ ಸಮೀಕರಣದ ಆಧಾರದಲ್ಲಿ ಈಡಿಗ (ಬಿಲ್ಲವ) ಸಮುದಾಯದ ಹರಿಪ್ರಸಾದ್ ಅವರಿಗೆ ಪಕ್ಷವು ರಾಜ್ಯ ಘಟಕದ ಚುಕ್ಕಾಣಿ ನೀಡಿದೆ.

ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಸವಾಲು ಅವರ ಮುಂದಿದೆ. ಮುಖ್ಯಮಂತ್ರಿ ಜತೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಸಂಘಟನೆಗೆ ಚುರುಕು ಮುಟ್ಟಿಸುವ ಹೊಣೆಯೂ ಅವರ ಎದುರಿಗೆ ಇದೆ.

ಹರಿಪ್ರಸಾದ್ ಪರಿಚಯ

l ತಂದೆಯ ಹೆಸರು: ಕೆಂಪಯ್ಯ

l ತಾಯಿ ಹೆಸರು: ಗುಣವತಿ ಕೆ.

l ಜನ್ಮ ದಿನಾಂಕ: 1954ರ ಜುಲೈ 29

l ವಿದ್ಯಾರ್ಹತೆ: ಬಿ.ಕಾಂ

ರಾಜಕೀಯ ಸ್ಥಾನಮಾನಗಳು

l ರಾಜ್ಯಸಭೆ ಸದಸ್ಯರಾಗಿ ಆಯ್ಕೆ: 1990, 2004, 2013 ಮತ್ತು 2014

l ವಿಧಾನ ಪರಿಷತ್ ಸದಸ್ಯ: 2020ರ ಜೂನ್ 30ರಿಂದ

l ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ: 2022ರ ಜನವರಿಯಿಂದ 2023ರ ಮೇವರೆಗೆ

l 1981-82: ರಾಜ್ಯ ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷ

l 1990-96: ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಮಿತಿಗಳ ಸಲಹಾ ಸಮಿತಿಯ ಸದಸ್ಯ

l 1995-96: ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಮಿತಿ ಹಾಗೂ ಕಾರ್ಮಿಕ ಕಲ್ಯಾಣ ಸಮಿತಿಯ ಸದಸ್ಯ

l 2004-2009: ಭಾರತೀಯ ವಿಜ್ಞಾನ ಸಂಸ್ಥೆ ಸಮಿತಿಯ ಸದಸ್ಯ

l 2004-2010: ನಗರಾಭಿವೃದ್ಧಿ ಸಮಿತಿ ಸದಸ್ಯ

l 2004-2010: ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸದಸ್ಯ

l 2006-2010: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸಲಹಾ ಸಮಿತಿ ಅಧ್ಯಕ್ಷ

l 2008-2010: ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದ ಸದಸ್ಯ

l 2008-2009: ಕೇಂದ್ರ ರೇಷ್ಮೆ ಮಂಡಳಿಯ ಸದಸ್ಯ

l 2008-2010: ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸದಸ್ಯ

l 2009-2010: ಕಾಫಿ ಮಂಡಳಿ ಸದಸ್ಯ

l 2013-2014: ಮಾಹಿತಿ ತಂತ್ರಜ್ಞಾನ ಸಮಿತಿ ಸದಸ್ಯ

l 2014-2017: ಹಿಂದುಳಿದ ವರ್ಗಗಳ ಸಮಿತಿಯ ಸದಸ್ಯ

ರಾಜಕೀಯ ಹಿನ್ನೆಲೆ

l 1972: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯತ್ವ ಸ್ವೀಕಾರ

l 1979-81: ಅಖಿಲ ಭಾರತ ಎನ್ಎಸ್ಯುಐ ಪ್ರಧಾನ ಕಾರ್ಯದರ್ಶಿ

l 1989-1990: ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ

l 1994- 1996: ಕರ್ನಾಟಕ ರಾಜ್ಯ ಸಂಸದರ ವೇದಿಕೆ ಸಂಯೋಜಕ

l 1997-1998: ಎಐಸಿಸಿ ಜಂಟಿ ಕಾರ್ಯದರ್ಶಿ

l 2000-2001: ಅಖಿಲ ಭಾರತ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ

l 2001-2006: ಎಐಸಿಸಿ ಕಾರ್ಯದರ್ಶಿ

l 2006-2018: ಎಐಸಿಸಿ ಪ್ರಧಾನ ಕಾರ್ಯದರ್ಶಿ

ಎಐಸಿಸಿ ಉಸ್ತುವಾರಿ

ಗುಜರಾತ್, ಪುದುಚೆರಿ, ದಿಯೂ ಮತ್ತು ದಮನ್, ಗೋವಾ, ದಾದರ್ ನಗರ್ ಹವೇಲಿ, ಹರಿಯಾಣ, ಮಧ್ಯಪ್ರದೇಶ, ಛತ್ತೀಸಗಢ, ಜಾರ್ಖಂಡ್, ಒಡಿಶಾ, ಬಿಹಾರ, ರಾಜಸ್ಥಾನ, ಪಂಜಾಬ್, ಮಹಾರಾಷ್ಟ್ರ, ಹಿಮಾಚಲ ಪ್ರದೇಶ, ತ್ರಿಪುರಾ, ಮಣಿಪುರ ಮತ್ತು ಉತ್ತರ ಪ್ರದೇಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.