ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಮಾಡಿ, ಮಸಿ ಎರಚಿರುವ ಘಟನೆಯನ್ನು ಖಂಡಿಸಿ ರಾಜ್ಯದಾದ್ಯಂತ ಮೇ 31ರಂದು ಕಪ್ಪು ದಿನ ಆಚರಿಸಲು ರೈತ ಸಂಘಟನೆ ಮುಖಂಡರು ಕರೆ ನೀಡಿದ್ದಾರೆ.

‘ಟಿಕಾಯತ್ ಮೇಲಾದ ದಾಳಿ, ಇಡೀ ರೈತ ಸಮುದಾಯ ಮೇಲಾದ ದಾಳಿ ಆಗಿದೆ. ಇದನ್ನು ಖಂಡಿಸಿ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಕಪ್ಪು ಪಟ್ಟಿ ಧರಿಸಿ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹಲವು ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ನೀಡುತ್ತಿವೆ’ ಎಂದು ರೈತ ಮುಖಂಡರಾದ ಕೆ.ಟಿ. ಗಂಗಾಧರ, ಬಡಗಲಪುರ ನಾಗೇಂದ್ರ, ಜಿ.ಸಿ. ಬಯ್ಯಾರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.