ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್‌ ಪ್ರಕರಣ | ಬ್ಲ್ಯಾಕ್‌ಮೇಲ್‌ ಮಾಡಿದರೆ ಕ್ರಮ: ಪರಮೇಶ್ವರ ಎಚ್ಚರಿಕೆ

Published 9 ಮೇ 2024, 14:31 IST
Last Updated 9 ಮೇ 2024, 14:31 IST
ಅಕ್ಷರ ಗಾತ್ರ

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರನ್ನು ಯಾರಾದರೂ ಬ್ಲ್ಯಾಕ್‌ಮೇಲ್‌ ಮಾಡಿದರೆ, ಅಂತಹವರ ವಿರುದ್ಧ ಎಸ್‌ಐಟಿ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಎಚ್ಚರಿಕೆ ನೀಡಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಎಚ್‌.ಡಿ.ಕುಮಾರಸ್ವಾಮಿ ಮಾಡಿದ ಆರೋಪಗಳಿಗೆಲ್ಲಾ ಉತ್ತರ ಕೊಡಲು ಸಾಧ್ಯವಿಲ್ಲ. ಎಸ್ಐಟಿ ಸಮರ್ಥವಾಗಿ ತನಿಖೆ ನಡೆಸುತ್ತಿದೆ. ಕುಮಾರಸ್ವಾಮಿ ರಾಜಕೀಯ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದರು.

‘ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಮೊದಲು ವರದಿ ಬರಲಿ. ವರದಿ ಬರುವವರೆಗೆ ಅದರಲ್ಲಿ ಏನಿರುತ್ತದೆ ಎಂಬುದು ನಮಗೂ ಗೊತ್ತಿರುವುದಿಲ್ಲ. ಟೀಕೆ– ಟಿಪ್ಪಣಿಗಳಿಗೆಲ್ಲಾ ಉತ್ತರ ಕೊಡಲು ಆಗುವುದಿಲ್ಲ. ಸುಮ್ಮನೆ ಹೇಳಿಕೆಗಳನ್ನು ಕೊಡುವುದೂ ಸರಿಯಲ್ಲ’ ಎಂದು ಅವರು ಹೇಳಿದರು.

‘ಡಿ.ಕೆ.ಶಿವಕುಮಾರ್ ಅವರು ಸಂತ್ರಸ್ತೆಯರನ್ನು ಕುಮಾರಕೃಪಾ ಅತಿಥಿ ಗೃಹದಲ್ಲಿ ಇರಿಸಿದ್ದಾರೆ’ ಎಂದು ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ, ‘ಅವರು ಹೇಳಿದ್ದಕ್ಕೆ ಉತ್ತರ ಕೊಡಲು ಆಗುತ್ತಾ, ತನಿಖೆ ನಡೆಸಲು ಎಸ್ಐಟಿಗೆ ಸ್ವಾತಂತ್ರ್ಯ ಕೊಡೋಣ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT