ಬೆಂಗಳೂರು: ಮಹದೇವಪುರದ ಶಾಸಕ ಅರವಿಂದ ಲಿಂಬಾವಳಿ ಅವರು ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿ ಇತ್ತೀಚೆಗೆ ಫೇಸ್ಬುಕ್ನಲ್ಲಿ ಹಿಂದಿಯಲ್ಲಿ ಪ್ರಚಾರ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಇದರ ಬೆನ್ನಲ್ಲೇ, ಹಿಂದಿಯಲ್ಲಿ ಭಾಷಣ ಮಾಡಿರುವುದರ ಬಗ್ಗೆ ಅವರು ಸ್ಪಷ್ಟೀಕರಣ ನೀಡಿದ್ದಾರೆ.

‘ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಗಳಲ್ಲಿ ಪ್ರಚಾರ ಭಾಷಣಗಳು ಇವೆ. ಕನ್ನಡ ಗೊತ್ತಿಲ್ಲದವರಿಗೆ 10 ಕಡೆಗಳಲ್ಲಿ ಕನ್ನಡ ತರಗತಿಗಳನ್ನು ನಡೆಸುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿಗೆ ಕಾರ್ಯಪಡೆ ರಚಿಸುತ್ತಿದ್ದೇನೆ. ಅದಕ್ಕೆ ಎಲ್ಲ ವರ್ಗದ ಜನರ ಸಹಕಾರ ಅಗತ್ಯ. ದುಡಿಯುವ ವರ್ಗಕ್ಕೆ ಅರ್ಥವಾಗಲಿ ಎಂಬ ಕಾರಣಕ್ಕೆ ಹಿಂದಿಯಲ್ಲಿ ಭಾಷಣ ಮಾಡಿದ್ದೇನೆ’ ಎಂದು ಲಿಂಬಾವಳಿ ಸ್ಪಷ್ಟನೆ ನೀಡಿದ್ದಾರೆ.

ಲಿಂಬಾವಳಿ ಅವರು ಮಹದೇವಪುರ ಅಭಿವೃದ್ಧಿ ಕುರಿತಂತೆ ಕನ್ನಡ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತನಾಡಿರುವ ಮೂರು ವಿಡಿಯೊಗಳನ್ನು ಫೇಸ್ಬುಕ್ನಲ್ಲಿ ಪ್ರಕಟಿಸಿದ್ದರು.ಹಿಂದಿ ಭಾಷೆಯಲ್ಲಿನ ವಿಡಿಯೊ ಮತ್ತುಸ್ಟೇಟಸ್ಹಾಕಿರುವುದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಶಾಸಕರನ್ನು ತರಾಟೆಗೆ ತಗೆದುಕೊಂಡಿದ್ದರು.

ಇದನ್ನೂ ಓದಿ:ಮಹದೇವಪುರ ಮತದಾರರಿಗೆ ಕನ್ನಡವೇ ಸಾಕಲ್ವಾ ಲಿಂಬಾವಳಿ..?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.