ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹2,000 ಮುಖಬೆಲೆಯ ನೋಟು ಸ್ವೀಕರಿಸಬಾರದೆಂಬ ಆದೇಶ ಹಿಂಪಡೆದ ಬಿಎಂಟಿಸಿ

Published 28 ಮೇ 2023, 7:57 IST
Last Updated 28 ಮೇ 2023, 7:57 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಯಾಣಿಕರಿಂದ ₹2,000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸಬಾರದು ಎಂದು ತನ್ನ ಸಿಬ್ಬಂದಿಗೆ ಸೂಚಿಸಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸದ್ಯ ಅದನ್ನು ಹಿಂಪಡೆದಿದೆ.

'ಇನ್ನು ಮುಂದೆ ಎಲ್ಲ ಸಿಬ್ಬಂದಿಯೂ ₹2,000 ಮುಖಬೆಲೆಯ ನೋಟುಗಳನ್ನು ಪ್ರಯಾಣಿಕರಿಂದ ಸ್ವೀಕರಿಸಬೇಕೆಂದು ಸೂಚಿಸಲಾಗುತ್ತಿದೆ' ಎಂದು ಹೊಸದಾಗಿ ಸುತ್ತೋಲೆ ಹೊರಡಿಸಿದೆ.

₹2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮೇ 19ರಂದು ಘೋಷಿಸಿತ್ತು. ಆದರೆ, ₹2,000 ಮುಖಬೆಲೆಯ ನೋಟುಗಳು ಕಾನೂನುಬದ್ಧ ಮಾನ್ಯತೆ ಹೊಂದಿರುವುದಾಗಿಯೂ ಆರ್‌ಬಿಐ ಹೇಳಿಕೆಯಲ್ಲಿ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT