ಬೆಂಗಳೂರು: ‘ಇಂಧನ ಇಲಾಖೆಯಿಂದ ಸ್ಮಾರ್ಟ್ ಮೀಟರ್ ಮೂಲಕ ಹಗಲು ದರೋಡೆ ನಡೆದಿದ್ದು, ಗ್ರಾಹಕರಿಗೆ ಅನ್ಯಾಯವಾಗಿದೆ. ಈ ಹಗರಣದ ಸಂಪೂರ್ಣ ಮಾಹಿತಿಯನ್ನು ರಾಜ್ಯಪಾಲರಿಗೆ ನೀಡಿದ್ದೇವೆ’ ಎಂದು ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ವಿರೋಧಪಕ್ಷದ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಬುಧವಾರ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಭೇಟಿಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

‘ಈ ಹಗರಣದಲ್ಲಿ ಗ್ರಾಹಕರಿಗೆ ಅನ್ಯಾಯವಾಗುತ್ತಿದೆ. ಸಾವಿರಾರು ಕೋಟಿ ಲೂಟಿ ನಡೆಯುತ್ತಿದೆ. ರಾಜ್ಯ ಸರ್ಕಾರ, ಇಂಧನ ಇಲಾಖೆಯ ಅಧಿಕಾರಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ. ಇದುವರೆಗೂ ಎಫ್ಐಆರ್ ದಾಖಲಾಗಿಲ್ಲ’ ಎಂದು ದೂರಿದರು.

‘ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗ ಮತ್ತು ಕೇಂದ್ರ ವಿದ್ಯುತ್ ಆಯೋಗದ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡಲಾಗಿದೆ. ಇದು ಮೊದಲ ಉಲ್ಲಂಘನೆ. ಸ್ಮಾರ್ಟ್ ಮೀಟರ್ ದರವೂ ದುಬಾರಿ. ಅರ್ಹತೆ ಇಲ್ಲದ ಗುತ್ತಿಗೆದಾರರಿಗೆ ಗುತ್ತಿಗೆ ಕೊಡಲಾಗಿದೆ. ಅಧಿಕಾರ ದುರ್ಬಳಕೆ ಮಾಡಿರುವ ವಿಚಾರವನ್ನೂ ರಾಜ್ಯಪಾಲರ ಗಮನಕ್ಕೆ ತರಲಾಗಿದೆ ಎಂದರು. ಶಾಸಕರಾದ ಕೆ.ಗೋಪಾಲಯ್ಯ, ಧೀರಜ್ ಮುನಿರಾಜು ಮತ್ತಿತರರು ನಿಯೋಗದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.