ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡಾವಣೆ ನಿರ್ಮಾಣಕ್ಕೆ ಪ್ರಾಧಿಕಾರಗಳಿಗೆ ಸೂಚನೆ: ಸಚಿವ ಬೈರತಿ ಸುರೇಶ್‌ ಸಲಹೆ

Published 21 ಮೇ 2024, 16:25 IST
Last Updated 21 ಮೇ 2024, 16:25 IST
ಅಕ್ಷರ ಗಾತ್ರ

ಬೆಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರಗಳು ತಲಾ ಕನಿಷ್ಠ 100 ಎಕರೆ ಜಮೀನು ಖರೀದಿ ಮಾಡಿ, ಅದರಲ್ಲಿ ಬಡಾವಣೆ ನಿರ್ಮಿಸಿ ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್‌ ಸೂಚಿಸಿದರು.

ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರ ಜತೆ ಮಂಗಳವಾರ ವಿಡಿಯೊ ಸಂವಾದ ನಡೆಸಿದ ಅವರು ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ನಡೆದಿರುವ ಕಾಮಗಾರಿಗಳು, ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಬಹಳಷ್ಟು ಪ್ರಾಧಿಕಾರಗಳು ಖಾಸಗಿಯವರು ನಿರ್ಮಿಸಿರುವ ಬಡಾವಣೆಗಳಿಗೆ ಅನುಮೋದನೆ ನೀಡುವುದಕ್ಕಷ್ಟೇ ಸೀಮಿತವಾಗಿವೆ. ಇದರಿಂದಾಗಿ ಪ್ರಾಧಿಕಾರಗಳು ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದು, ಮುಚ್ಚಬೇಕಾದ ಪರಿಸ್ಥಿತಿ ಎದುರಾಗಿದೆ. ಇದಕ್ಕೆ ಪರಿಹಾರವೆಂದರೆ ಬಡಾವಣೆಗಳನ್ನು ನಿರ್ಮಾಣ ಮಾಡಿ ನಿವೇಶನಗಳನ್ನು ಹಂಚುವ ಕೆಲಸ ಮಾಡಬೇಕಾಗಿದೆ. ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ವಿತರಿಸುವ ಕೆಲಸವನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಸಾಧ್ಯವಾದ ಮಟ್ಟಿಗೆ ಸರ್ಕಾರಿ ಜಮೀನುಗಳನ್ನು ಗುರುತಿಸಬೇಕು. ಒಂದು ವೇಳೆ ಸಾಧ್ಯವಾಗದಿದ್ದರೆ ಕೃಷಿಯೇತರ ಜಮೀನುಗಳನ್ನು ಗುರುತಿಸಿ ಸಂಬಂಧಿಸಿದ ರೈತರೊಂದಿಗೆ ಮಾತನಾಡಿ 50:50 ಅನುಪಾತದಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಬೇಕೆಂದು ಅವರು ಸೂಚಿಸಿದರು.

ಕೆರೆ, ಉದ್ಯಾನವನ, ರಸ್ತೆ ಅಭಿವೃದ್ಧಿ, ಮೇಲ್ಸೇತುವೆ ಸೇರಿ ಎಲ್ಲ ರೀತಿಯ ಯೋಜನೆಗಳನ್ನು ಆಯಾ ನಗರಾಭಿವೃದ್ಧಿ ಪ್ರಾಧಿಕಾರಗಳ ಮೂಲಕವೇ ನಿರ್ಮಿಸಬೇಕು. ಇವುಗಳ ನಿರ್ಮಾಣದ ನಂತರ ಪ್ರಾಧಿಕಾರದ ಹೆಸರುಗಳನ್ನು ನಮೂದಿಸಬೇಕೆಂದು ಹೇಳಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಹಿರಿಯ ಅಧಿಕಾರಿಗಳಾದ ವೆಂಕಟಾಚಲಪತಿ, ತಿಪ್ಪೇಸ್ವಾಮಿ, ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT