ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮೇಶ್ವರಂ ಕೆಫೆ ರೀತಿಯಲ್ಲಿ ಬಾಂಬ್ ಸ್ಫೋಟದ ಬೆದರಿಕೆ: CM, DCMಗೆ ಇ–ಮೇಲ್

Published 5 ಮಾರ್ಚ್ 2024, 10:45 IST
Last Updated 5 ಮಾರ್ಚ್ 2024, 10:45 IST
ಅಕ್ಷರ ಗಾತ್ರ

ಬೆಂಗಳೂರು: ‘ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ರೀತಿಯಲ್ಲಿ ಮತ್ತಷ್ಟು ಕಡೆ ಬಾಂಬ್ ಸ್ಫೋಟಿಸುತ್ತೇವೆ’ ಎಂಬುದಾಗಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಅವರ ಇ–ಮೇಲ್‌ಗೆ ಬೆದರಿಕೆ ಸಂದೇಶ ಬಂದಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

‘2.5 ಮಿಲಿಯನ್ ಡಾಲರ್ (₹ 20.27 ಕೋಟಿ) ಹಣ ನೀಡಬೇಕು. ಇಲ್ಲದಿದ್ದರೆ, ಬಸ್‌ ನಿಲ್ದಾಣ, ರೈಲು ನಿಲ್ದಾಣ ಹಾಗೂ ಇತರೆಡೆ ಬಾಂಬ್ ಸ್ಫೋಟಿಸುತ್ತೇವೆ’ ಎಂಬುದಾಗಿ ಸಂದೇಶದಲ್ಲಿ ಬೆದರಿಸಲಾಗಿದೆ.

ಬೆದರಿಕೆ ಸಂದೇಶ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು, ಇ–ಮೇಲ್ ಐಡಿ ಆಧರಿಸಿ ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT