ಕೊಪ್ಪಳ: ‘ರಾಜ್ಯವನ್ನು ಕಾಂಗ್ರೆಸ್ ಪ್ರಾಚೀನ ಕಾಲಕ್ಕೆ ತೆಗೆದುಕೊಂಡು ಹೋಗುತ್ತಿದೆ. ತಂತ್ರಜ್ಞಾನ ಬಹಳಷ್ಟು ಮುಂದೆ ಹೋಗಿದೆ. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಹಲವು ಚುನಾವಣೆಗಳಾಗಿವೆ. ಕಾಂಗ್ರೆಸ್ ಪಕ್ಷ ಸೋಲುತ್ತಿರುವುದರಿಂದ ಬ್ಯಾಲೆಟ್ ಪೇಪರ್ ಕಡೆಗೆ ಹೋಗುತ್ತಿದೆ. ಆದರೆ ಬ್ಯಾಲೆಟ್ ಪೇಪರ್ನಲ್ಲಿ ಮೋಸ ಮಾಡಿ ಗೆದ್ದಿದ್ದ ಶೃಂಗೇರಿಯಲ್ಲಿ ಈಗ ಸೋತಿರುವುದು ಸಾಬೀತಾಗಿದೆ. ಇದು ಕಾಂಗ್ರೆಸ್ಗೆ ಆದ ಮುಖಭಂಗ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲ್ಲೂಕಿನ ಕೋಳೂರು–ಕಾಟ್ರಳ್ಳಿಯಲ್ಲಿ ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು ‘ರಾಜ್ಯದಲ್ಲಿ ನಡೆದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನಲ್ಲಿಯೂ ಬಿಜೆಪಿ ಬಹುಮತ ಪಡೆಯಲಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

‘ನಾವು ಮಾಡಿರುವ ಸಾಧನೆಗಳು ಮತ್ತು ಚುನಾವಣೆಯಲ್ಲಿ ಸಂಘಟಿತವಾದ ಪ್ರಚಾರದ ಪರಿಣಾಮ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಗಳಿಸುವ ವಿಶ್ವಾಸವಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.