ಬೆಂಗಳೂರು: ಗೃಹ ಸಚಿವ ಅಮಿತ್ ಶಾ ಅವರ ಕರೆಯ ಮೇರೆಗೆ ಶಾಸಕ ಬಸವರಾಜ ಬೊಮ್ಮಾಯಿ ಭಾನುವಾರ ರಾತ್ರಿ ದೆಹಲಿಗೆ ತೆರಳಿದರು.
ವಿರೋಧಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಆಯ್ಕೆ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರ್ಕಾರದ ವಿರುದ್ಧದ ಬಿಜೆಪಿ ಹಮ್ಮಿಕೊಂಡ ಹಲವು ಹೋರಾಟಗಳಲ್ಲಿ ಬೊಮ್ಮಾಯಿ ಮುಂಚೂಣಿಯಲ್ಲಿದ್ದರು.
ವಿರೋಧಪಕ್ಷದ ನಾಯಕನ ಹುದ್ದೆಯ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಬೊಮ್ಮಾಯಿ ಅವರನ್ನು ಶಾ ಕರೆಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.