ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಿ: ಬೊಮ್ಮಾಯಿ

Last Updated 31 ಮಾರ್ಚ್ 2022, 10:12 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಕೂಡ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಶಾಂತಿ ಮತ್ತು ಪ್ರಗತಿಗೆ ಕರ್ನಾಟಕ ಹೆಸರುವಾಸಿ. ಎಲ್ಲರೂ ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡಿದರು.

ಕೋಮುವಾದ ಜಾಗತಿಕ ಸಂಘರ್ಷವಾಗುತ್ತಿದೆ ಎಂದು ರಾಜ್ಯದ ಬೆಳವಣಿಗೆಗಳ ಬಗ್ಗೆ ಉದ್ಯಮಿ ಕಿರಣ ಮಜುಂದಾರ್ ಷಾ ಅವರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಸಮವಸ್ತ್ರದ ವಿಷಯ ಈಗಾಗಲೇ ಹೈಕೋರ್ಟ್‌ನಲ್ಲಿ ಇತ್ಯರ್ಥವಾಗಿದೆ. ಬೇರೆ ಬೇರೆ ವಿಷಯಗಳ ಬಗ್ಗೆ ತಮ್ಮ ತಮ್ಮ ನಂಬಿಕೆಗಳ ಆಧಾರದ ಮೇಲೆ ಇಷ್ಟು ವರ್ಷ ನಾವೆಲ್ಲರೂ ಬದುಕು ನಡೆಸುತ್ತಿದ್ದೇವೆ. ಕರ್ನಾಟಕ ರಾಜ್ಯ ಶಾಂತಿಗೆ ಮತ್ತು ಪ್ರಗತಿಗೆ ಹೆಸರಾಗಿದೆ. ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲರೂ ಸಂಯಮ ವಹಿಸಬೇಕು. ಸಾಮಾಜಿಕವಾಗಿ ಹಲವಾರು ಸಮಸ್ಯೆಗಳು ಉದ್ಭವವಾಗುವ ಸಂದರ್ಭದಲ್ಲಿ ಕೂತು ಚರ್ಚೆ ಮಾಡಿ ಬಗೆಹರಿಸಲು ಸಾಧ್ಯವಿದೆ. ಆದ್ದರಿಂದ ಎಲ್ಲರೂ ಸಂಯಮದಿಂದ ವರ್ತಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT