ಬೆಂಗಳೂರು: ‘ಬಿ ಕ್ಲಿಪ್ ಅಲ್ಯುಮ್ನಿ ಸಂಸ್ಥೆಯು ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿರುವ 100 ಮಹಿಳೆಯರಿಗೆ ‘ಬೆಂಗಳೂರು ವಿಮೆನ್ ಅಚೀವರ್ಸ್’ ಪ್ರಶಸ್ತಿ ನೀಡಲು ನಿರ್ಧರಿಸಿದೆ. ಈ ಕಾರ್ಯಕ್ರಮ ಇದೇ 20ರಂದು ವಾಸವಿ ಆಡಿಟೋರಿಯಂನಲ್ಲಿ ನಡೆಯಲಿದೆ’ ಎಂದು ಕವಿತಾ ರೆಡ್ಡಿ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ವಾರ್ಡ್ ಮಟ್ಟದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ವಾರ್ಡ್‌ಗಳಲ್ಲಿರುವ ಬಿ ಕ್ಲಿಪ್ ಪ್ರತಿನಿಧಿಗಳು ಒಟ್ಟು 120 ಸಾಧಕಿಯರನ್ನು ನಾಮನಿರ್ದೇಶನ ಮಾಡಿದ್ದರು. ಈ ಪೈಕಿ ಆಯ್ಕೆ ಸಮಿತಿಯು 100 ಮಂದಿಯ ಹೆಸರು ಅಂತಿಮಗೊಳಿಸಿದೆ’ ಎಂದರು.

ಕಾವೇರಿ ಕೇದಾರನಾಥ್ ‘ಶಿಕ್ಷಣ, ಕ್ರೀಡೆ, ಆರೋಗ್ಯ, ಸಾಮಾಜಿಕ ಸೇವೆ, ಪರಿಸರ, ಮಹಿಳಾ ಸಬಲೀಕರಣ, ಕೋವಿಡ್ ವಾರಿಯರ್ಸ್ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿರುವವರನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.