ಶಿವಮೊಗ್ಗ: ಕೇಂದ್ರದ ನಿಯಮಾವಳಿಯಂತೆ ಆದಾಯ ತೆರಿಗೆ ಪಾವತಿದಾರರು, ಸ್ವಂತ ಕಾರು ಇದ್ದವರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ, ಅವರಿಗೆ ಎಪಿಎಲ್ ಕಾರ್ಡ್ ನೀಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಇಲ್ಲಿ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಲಿವೆ. ಆದರೆ ಅರ್ಹರು ಆತಂಕ ಪಡುವುದು ಬೇಡ’ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 6,200 ಕುಟುಂಬಗಳ ಬಿಪಿಎಲ್ ಕಾರ್ಡ್ ಅನರ್ಹಗೊಂಡಿವೆ’ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.

‘ಪಡಿತರ ವಿತರಕರಿಗೆ ಮೇ ತಿಂಗಳಿಂದ ಕಮಿಷನ್ ಬಾಕಿ ಇದೆ ಎಂಬ ಪ್ರಶ್ನೆಗೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು ಸೇರಿಸಿ ಸೆಪ್ಟೆಂಬರ್ವರೆಗಿನ ಕಮಿಷನ್ ಕೊಡಲು ನಿರ್ಧರಿಸಿದೆ. ವಾರದೊಳಗೆ ಎಲ್ಲ ಪಡಿತರ ವಿತರಕರಿಗೆ ಕಮಿಷನ್ ನೀಡಲಿದ್ದೇವೆ’ ಎಂದರು.

ಇನ್ನು ಮುಂದೆ ಎಲ್ಲಾ ಪಡಿತರ ಅಂಗಡಿಗಳಲ್ಲೂ ಆಯಾ ತಿಂಗಳ 10ನೇ ತಾರೀಕು ಪಡಿತರ ನೀಡುವಂತೆ ಕ್ರಮವಹಿಸಲಾಗುವುದು. ‘ಒನ್ ನೇಷನ್ ಒನ್ ಕಾರ್ಡ್’ ಯೋಜನೆಯಡಿ ವಲಸಿಗ ಕಾರ್ಮಿಕರಿಗೂ ತಕ್ಷಣ ರೇಷನ್ ಕಾರ್ಡ್ ನೀಡಲಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.