ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ ಕಾರ್ಡ್ಗಳಾಗಿ ಬದಲಿಸಿ, ಅಷ್ಟೇ ಸಂಖ್ಯೆಯ ಹೊಸ ಬಿಪಿಎಲ್ ಕಾರ್ಡ್ಗೆ ಮುಂದಿನ ತಿಂಗಳು ಅರ್ಜಿ ಆಹ್ವಾನಿಸಲು ಆಹಾರ ಇಲಾಖೆ ನಿರ್ಧರಿಸಿದೆ.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ‘ಸರ್ಕಾರದ ಮಾನದಂಡಗಳ ಅನ್ವಯ ಬಿಪಿಎಲ್ ಕಾರ್ಡ್ಗಳನ್ನು ಪರಿಷ್ಕರಿಸಲಾಗುವುದು. ಅನರ್ಹವೆಂದು ಕಂಡುಬಂದರೆ ಎಪಿಎಲ್ಗೆ ವರ್ಗಾವಣೆ ಮಾಡುತ್ತೇವೆ. ಯಾವ ಪಡಿತರ ಚೀಟಿಗಳನ್ನೂ ರದ್ದು ಮಾಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಎಲ್ಲ ಕಾರ್ಡ್ಗಳನ್ನು ಪರಿಷ್ಕರಣೆ ಮಾಡುತ್ತೇವೆ. ಬಿಪಿಎಲ್ನಿಂದ ಎಪಿಎಲ್ಗೆ ವರ್ಗಾವಣೆ ಮಾಡಿದ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯ ಒಳಗೆ ಸರಿಪಡಿಸಿ ಆಹಾರಧಾನ್ಯ ಹಂಚಿಕೆ ಮಾಡಲಾಗುವುದು’ ಎಂದರು.

‘ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ಗಳು ಅತೀ ಹೆಚ್ಚು ಇವೆ. ಶೇಕಡ 75ರಷ್ಟು ಬಿಪಿಎಲ್ ಕಾರ್ಡ್ಗಳು ಕರ್ನಾಟಕದಲ್ಲಿವೆ. ಹೀಗಾಗಿ, ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಅನಿವಾರ್ಯವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.